ದೇಶದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಒಂದೇ ದಿನ 92,071 ಕೇಸ್ ಪತ್ತೆ, 48 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ, 79,772 ಮಂದಿ ಬಲಿ

ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 92,071 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 48,46,428ಕ್ಕೆ ತಲುಪಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 92,071 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 48,46,428ಕ್ಕೆ ತಲುಪಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 1,136 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖಅಯೆ ಕೂಡ 79,772ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ 48,46,428 ಮಂದಿ ಸೋಂಕಿತರ ಪೈಕಿ 37,80,108 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನು 9,86,598 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com