ದೆಹಲಿ ಗಲಭೆ ಪ್ರಕರಣ: ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನ 

ದೆಹಲಿ ಗಲಭೆ ಪ್ರಕರಣದಲ್ಲಿ ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನಕ್ಕೊಳಗಾಗಿದ್ದಾರೆ. 

Published: 14th September 2020 01:34 AM  |   Last Updated: 14th September 2020 01:37 AM   |  A+A-


Umar Khalid

ಉಮರ್ ಖಾಲಿದ್

Posted By : Srinivas Rao BV
Source : The New Indian Express

ನವದೆಹಲಿ: ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣದಲ್ಲಿ ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನಕ್ಕೊಳಗಾಗಿದ್ದಾರೆ. 

ಭಾನುವಾರ ತಡ ರಾತ್ರಿ ಬಂಧನ ಮಾಡಲಾಗಿದೆ. ದೆಹಲಿ ಪೊಲೀಸ್ ಅಪರಾಧ ವಿಭಾಗದ ಅಧಿಕಾರಿಗಳು ಉಮರ್ ಖಾಲಿದ್ ನ್ನು ಕೆಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. 

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿದ್ದ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಉಮರ್ ಖಾಲೀದ್, ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಸ್ವರಾಜ್ ಅಭಿಯಾನ್ ನಾಯಕ ಯೋಗೇಂದ್ರ ಯಾದವ್, ಅರ್ಥಶಾಸ್ತ್ರಜ್ಞರಾದ ಜಯತಿ ಘೋಷ್, ದೆಹಲಿ ವಿವಿ ಪ್ರಾಧ್ಯಾಪಕ, ಕಾರ್ಯಕರ್ತ ಅಪೂರ್ವಾನಂದ್ ಹಾಗೂ ಡಾಕ್ಯುಮೆಂಟರಿ ಫಿಲ್ಮ್ ಮೇಕರ್ ರಾಹುಲ್ ರಾಯ್ ಅವರುಗಳನ್ನು ಸಹ ಪಿತೂರಿದಾರರು ಎಂದು ಆರೋಪಿಸಿದ್ದರು. ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ ಹಾಗೂ ಯುಎಪಿಎ ನ ಪ್ರಕಾರ ಖಾಲೀದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp