ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ, ಶೂನ್ಯ ವೇಳ ರದ್ದು ನಿರ್ಣಯ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಸೋಮವಾರ ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ ಮತ್ತು ಶೂನ್ಯ ವೇಳೆಯನ್ನು ರದ್ದುಪಡಿಸುವ ನಿರ್ಣಯ ಕೈಗೊಳ್ಳಲಾಗಿದೆ.
ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ

ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಸೋಮವಾರ ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ ಮತ್ತು ಶೂನ್ಯ ವೇಳೆಯನ್ನು ರದ್ದುಪಡಿಸುವ ನಿರ್ಣಯ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಟೀಕಿಸಿದ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು, ಪ್ರಶ್ನೋತ್ತರ ಅವಧಿ "ಸದನದ ಸುವರ್ಣ ಅವಧಿ" ಎಂದು ಹೇಳಿದ್ದಾರೆ.

ಪ್ರಶೋತ್ತರ ಅವಧಿ ಗೋಲ್ಡನ್ ಅವಧಿ ಇದ್ದಂತೆ. ಆದರೆ, ನೀವು ಪರಿಸ್ಥಿತಿಯ ಕಾರಣ ನೀಡಿ ಈ ಅವಧಿಯನ್ನು ಮೊಟಕುಗೊಳಿಸಿರುವುದಾಗಿ ಹೇಳುತ್ತಿದ್ದೀರಿ. ಕಲಾಪವನ್ನು ನಡೆಸಿ. ಆದರೆ, ಪ್ರಶ್ನೋತ್ತರ ಅವಧಿಗೂ ಅವಕಾಶ ನೀಡಿ. ಪ್ರಶ್ನೋತ್ತರ ಹಾಗೂ ಶೂನ್ಯ ಅವಧಿಯನ್ನು ರದ್ದುಗೊಳಿಸುವ ಮೂಲಕ ನೀವು ಪ್ರಜಾಪ್ರಭುತ್ವದ ಕತ್ತುಹಿಸುಕುವ ಪ್ರಯತ್ನ ಮಾಡುತ್ತಿದ್ದೀರಿ ಎಂದು ಲೋಕಸಭೆ ಕಾಂಗ್ರೆಸ್ ನಾಯದ ಅಧಿರ್ ರಂಜನ್ ಚೌಧರಿ ಅವರು ಹೇಳಿದರು. 

ಇದಕ್ಕೆ ಪ್ರತಿಕ್ರಿಯೆ ನೀಡಿದ ಲೋಕಸಭಾ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿಯವರು. ಇದೊಂದು ಅಸಾಧಾರಣ ಪರಿಸ್ಥಿತಿಯಾಗಿದ್ದು, ಉಭಯ ಸದನಗಳನ್ನು ಒಮ್ಮೆಲೆ ಕಾರ್ಯ ನಡೆಸಲು ಸಾಧ್ಯವಾಗದ ಸಂದರ್ಭದಲ್ಲಿಯೂ ನಾವಿಲ್ಲಿ ಸುಮಾರು 800-850 ಸಂಸದರು ಒಟ್ಟಿಗೆ ಭೇಟಿಯಾಗಿದ್ದೇವೆ. ಸರ್ಕಾರವನ್ನು ಪ್ರಶ್ನಿಸಲು ಹಲವು ಮಾರ್ಗಗಳಿವೆ. ಸರ್ಕಾರ ಯಾವುದೇ ಚರ್ಚೆಗಳಿಂದಲೂ ಓಡಿ ಹೋಗುತ್ತಿಲ್ಲ. ಎಲ್ಲಾ ವಿಚಾರಗಳ ಕುರಿತು ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆಂದು ತಿಳಿಸಿದರು. 

ಬಳಿಕ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, 30 ನಿಮಿಷಗಳ ಪ್ರಶ್ನೋತ್ತರ ಹಾಗೂ ಶೂನ್ಯ ಅವಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಬಹುತೇಕ ಪಕ್ಷಗಳ ನಾಯಕರು ಒಪ್ಪಿಕೊಂಡಿದ್ದರು. ಸ್ಪೀಕರ್ ಕೈಗೊಂಡ ನಿರ್ಧಾರವನ್ನು ನಾವು ಒಪ್ಪಿದ್ದೇವೆ. ಕೊರೋನಾದಂತಹ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಸದನದಲ್ಲಿರುವ ಪ್ರತೀಯೊಬ್ಬ ಸದಸ್ಯರೂ ಸಹಕಾರ ನೀಡುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com