ಸಂಸತ್ ಮುಂಗಾರು ಅಧಿವೇಶನ: ಮೊದಲ ದಿನವೇ ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ 17 ಸಂಸದರಿಗೆ ಕೊರೋನಾ ಪಾಸಿಟಿವ್!

ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು ಇದಕ್ಕೂ ಮುನ್ನ ಸಂಸದರಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತು. ಇದರಲ್ಲಿ 17 ಸಂಸದರಿಗೆ ಕೊರೋನಾ ಮಹಾಮಾರಿ ವಕ್ಕರಿಸಿರುವುದು ದೃಢವಾಗಿದೆ. 

Published: 14th September 2020 04:02 PM  |   Last Updated: 14th September 2020 04:02 PM   |  A+A-


Anant Kumar Hegde

ಅನಂತ್ ಕುಮಾರ್ ಹೆಗ್ಡೆ

Posted By : vishwanath
Source : The New Indian Express

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು ಇದಕ್ಕೂ ಮುನ್ನ ಸಂಸದರಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತು. ಇದರಲ್ಲಿ 17 ಸಂಸದರಿಗೆ ಕೊರೋನಾ ಮಹಾಮಾರಿ ವಕ್ಕರಿಸಿರುವುದು ದೃಢವಾಗಿದೆ. 

ಸೆಪ್ಟೆಂಬರ್ 13ರಂದು ಸಂಸದರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ಇದರಲ್ಲಿ 17 ಸಂಸದರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಬಿಜೆಪಿಯ 12 ಸಂಸದರು, ವೈಎಸ್ಆರ್ ಕಾಂಗ್ರೆಸ್ ನ 2, ಶಿವಸೇನೆ, ಡಿಎಂಕೆ ಮತ್ತು ಆರ್ಎಲ್ಪಿ ಪಕ್ಷದ ತಲಾ ಒಬ್ಬ ಸಂಸದರಿಗೆ ಕೊರೋನಾ ದೃಢಪಟ್ಟಿದೆ. 

ಈ ಪೈಕಿ ಕೊರೋನಾಗೆ ತುತ್ತಾಗಿರುವ ಬಿಜೆಪಿಯ ಸಂಸದ ಸುಕಾಂತ್ ಮಜೂಂದಾರ್ ತಮಗೆ ಕೊರೋನಾ ಪಾಸಿಟಿವ್ ಬಂದಿರುವುದನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇನ್ನು ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಮೀನಾಕ್ಷಿ ಲೇಕಿಗೂ ಕೊರೋನಾ ವಕ್ಕರಿಸಿದೆ.

ಇದಕ್ಕೂ ಮುನ್ನ ಅಮಿತಾ ಶಾ ಸೇರಿದಂತೆ ಏಳು ಕೇಂದ್ರ ಸಚಿವರು ಮತ್ತು 25 ಸಂಸದರು ಕೊರೋನಾಗೆ ತುತ್ತಾಗಿದ್ದರು.


Stay up to date on all the latest ರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp