'ಪ್ರಧಾನಿ ಮೋದಿ ನವಿಲುಗಳ ಜೊತೆ ಬ್ಯುಸಿಯಾಗಿದ್ದಾರೆ, ನಿಮ್ಮ ಜೀವನವನ್ನು ನೀವೇ ಕಾಪಾಡಿಕೊಳ್ಳಿ':ರಾಹುಲ್ ಗಾಂಧಿ 

ಕೋವಿಡ್-19 ನಿರ್ವಹಣೆ, ಆರ್ಥಿಕ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರಂತರವಾಗಿ ಟೀಕಿಸುತ್ತಾ ಬಂದಿದ್ದಾರೆ.

Published: 14th September 2020 10:27 AM  |   Last Updated: 14th September 2020 01:30 PM   |  A+A-


Rahul Gandhi

ರಾಹುಲ್ ಗಾಂಧಿ

Posted By : Sumana Upadhyaya
Source : ANI

ನವದೆಹಲಿ: ಕೋವಿಡ್-19 ನಿರ್ವಹಣೆ, ಆರ್ಥಿಕ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರಂತರವಾಗಿ ಟೀಕಿಸುತ್ತಾ ಬಂದಿದ್ದಾರೆ.

ಮತ್ತೆ ಪ್ರಧಾನಿ ಮೋದಿಯವರ ವಿರುದ್ಧ ಟೀಕಾಪ್ರಹಾರ ಮುಂದುವರಿಸಿರುವ ರಾಹುಲ್ ಗಾಂಧಿ, ಮೋದಿಯವರು ನವಿಲುಗಳ ಜೊತೆ ಬ್ಯುಸಿಯಾಗಿದ್ದಾರೆ, ಹೀಗಾಗಿ ದೇಶದ ಜನರು ನಿಮ್ಮ ಜೀವನವನ್ನು ನೀವೇ ನೋಡಿಕೊಳ್ಳಬೇಕು, ನಿಮ್ಮ ಜಾಗ್ರತೆಯಲ್ಲಿ ನೀವಿರಿ ಎಂದು ಹೆಚ್ಚಾಗುತ್ತಿರುವ ಕೊರೋನಾ ಪ್ರಕರಣದ ಬಗ್ಗೆ ಪ್ರಧಾನಿಯವರ ಕಾಲೆಳೆದಿದ್ದಾರೆ.

ಈ ವಾರ ಭಾರತದಲ್ಲಿ ಕೋವಿಡ್-19 ಪ್ರಕರಣಗಳು 50 ಲಕ್ಷ ಗಡಿ ದಾಟಬಹುದು. ಸಕ್ರಿಯ ಕೇಸುಗಳೇ 10 ಲಕ್ಷವಾಗಬಹುದು. ಒಬ್ಬ ಮನುಷ್ಯನ ಅಹಂಕಾರದ ಕೊಡುಗೆಯೇ ಸರಿಯಾದ ಯೋಜನೆ ಹಾಕಿಕೊಳ್ಳದೆ ಲಾಕ್ ಡೌನ್ ಹೇರಿಕೆ ಮಾಡಿದ್ದು, ಇದರಿಂದ ದೇಶದೆಲ್ಲೆಡೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸ್ವಾವಲಂಬಿಗಳಾಗಿ, ಆತ್ಮ ನಿರ್ಭರರಾಗಿ ಎಂದು ಪ್ರಧಾನಿಯವರು ಹೇಳುತ್ತಾರೆ. ಅದರರ್ಥ ನಿಮ್ಮ ಜೀವನವನ್ನು ನೀವೇ ನೋಡಿಕೊಳ್ಳಿ ಎಂದು, ಯಾಕೆಂದರೆ ಪ್ರಧಾನಿಯವರು ತಮ್ಮ ನವಿಲುಗಳ ಜೊತೆ ಬ್ಯುಸಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು ಪ್ರಧಾನಿಯವರು ತಮ್ಮ ಕಚೇರಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, ಪ್ರಧಾನಿಯವರು ತಮ್ಮ ನವಿಲುಗಳ ಜೊತೆ ಸಮಯ ಕಳೆಯುತ್ತಿದ್ದಾರೆ. ಅವರಿಗೆ ದೇಶದ ನಾಗರಿಕರ ಬಗ್ಗೆ ಚಿಂತೆಯಿಲ್ಲ ಎಂದು ಟೀಕಿಸಿದ್ದರು.

ರಾಹುಲ್ ಗಾಂಧಿ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ಭಾಗದಲ್ಲಿ ಅನುಪಸ್ಥಿತರಿರುತ್ತಾರೆ, ಅವರು ತಮ್ಮ ತಾಯಿ ಸೋನಿಯಾ ಗಾಂಧಿಯವರನ್ನು ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp