ವಾಯುಯಾನ ನಿಯಂತ್ರಕರಿಗೆ ಶಾಸನಬದ್ಧ ಸ್ಥಾನಮಾನ ನೀಡುವ ಮಸೂದೆಗೆ ಸಂಸತ್ತು ಅನುಮೋದನೆ

ಭಾರತದ ವಾಯುಯಾನ ಸುರಕ್ಷತಾ ರೇಟಿಂಗ್‌ಗಳನ್ನು ಸುಧಾರಿಸಲು ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ ಜನರಲ್ (ಡಿಜಿಸಿಎ) ಸೇರಿದಂತೆ ನಿಯಂತ್ರಕ ಸಂಸ್ಥೆಗಳಿಗೆ ಶಾಸನಬದ್ಧ ಸ್ಥಾನಮಾನವನ್ನು ನೀಡುವ ಮಸೂದೆಯನ್ನು ಸಂಸತ್ತು ಮಂಗಳವಾರ ಅಂಗೀಕರಿಸಿತು.

Published: 15th September 2020 02:55 PM  |   Last Updated: 15th September 2020 02:55 PM   |  A+A-


ಸಂಸತ್ತು

Posted By : Raghavendra Adiga
Source : PTI

ನವದೆಹಲಿ: ಭಾರತದ ವಾಯುಯಾನ ಸುರಕ್ಷತಾ ರೇಟಿಂಗ್‌ಗಳನ್ನು ಸುಧಾರಿಸಲು ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ ಜನರಲ್ (ಡಿಜಿಸಿಎ) ಸೇರಿದಂತೆ ನಿಯಂತ್ರಕ ಸಂಸ್ಥೆಗಳಿಗೆ ಶಾಸನಬದ್ಧ ಸ್ಥಾನಮಾನವನ್ನು ನೀಡುವ ಮಸೂದೆಯನ್ನು ಸಂಸತ್ತು ಮಂಗಳವಾರ ಅಂಗೀಕರಿಸಿತು.

ವೈಮಾನಿಕ  (ತಿದ್ದುಪಡಿ) ಮಸೂದೆ, 2020, ದೇಶದ ಸಶಸ್ತ್ರ ಪಡೆಗಳಿಗೆ ಸೇರಿದ ವಿಮಾನಗಳನ್ನು 1934 ರ ವಿಮಾನ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಡಲು ಸಮ್ಮತಿಸಲಿದೆ.

ಹೊಸ ನಿಯಮಗಳ ಉಲ್ಲಂಘನೆಗಾಗಿ ದಂಡದ ಮೊತ್ತವನ್ನು 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗೆ ಹೆಚ್ಚಿಸಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ನೂತನ ಮಸೂದೆಯನ್ನು ರಾಜ್ಯಸಭೆಯಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಯಿತು.

ಇದು ಮಾರ್ಚ್ ನಲ್ಲಿ ಲೋಕಸಭೆಯ ಅನುಮೋದನೆ ಪಡೆದಿತ್ತು. 

Stay up to date on all the latest ರಾಷ್ಟ್ರೀಯ news
Poll
Covid-19_vaccine1

ಕೋವಿಡ್-19 ಲಸಿಕೆ ಅಂತಿಮವಾಗಿ ನಮಗೆ ಸಹಜ ಸ್ಥಿತಿಗೆ ಬರಲು ಸಹಾಯ ಮಾಡುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp