ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಸುಂದರ್ಬನಿ ಸೆಕ್ಟರ್'ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಜೌರಿ: ಜಮ್ಮು ಮತ್ತು ಕಾಶ್ಮೀರದ ಸುಂದರ್ಬನಿ ಸೆಕ್ಟರ್'ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ. 

ಸುಂದರ್ಬನಿ ಸೆಕ್ಟರ್ ಬಳಿ ಪಾಕಿಸ್ತಾನ ನಿನ್ನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಯಕ್ ಅನೀಶ್ ಥೋಮಸ್ ಎಂಬ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಯೋಧ ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ಕೂಡ ತಕ್ಕ ಉತ್ತ ನೀಡುತ್ತಿದೆ, ನಾಯಕ್ ಅನೀಶ್ ಅತ್ಯಂತ ವೀರ ಯೋಧರಾಗಿದ್ದು, ಇತರರಿಗೆ ಪ್ರೇರಣೆಯಾಗಿದ್ದರು. ಅವರ ತ್ಯಾಗವನ್ನು ದೇಶ ಸದಾಕಾಲ ಸ್ಮರಿಸುತ್ತದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com