ಭಾರತದಲ್ಲಿ ಇದುವರೆಗೆ 6 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಭಾರತದಲ್ಲಿ ಇದೂವರೆಗೂ 6 ಕೋಟಿಗೂ ಹೆಚ್ಚು ಮಂದಿಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ತಿಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಇದೂವರೆಗೂ 6 ಕೋಟಿಗೂ ಹೆಚ್ಚು ಮಂದಿಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ತಿಳಿಸಿದೆ. 

ಐಸಿಎಂಆರ್ ಮಾಹಿತಿ ನೀಡಿರುವ ಪ್ರಕಾರ ಈ ವರೆಗೂ ಅಂದರೆ ಸೆಪ್ಟೆಂಬರ್ 16 ರವರೆಗೂ 5,06,50,128 ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 11,36,613 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಐಸಿಎಂಆರ್ ಮಾಹಿತಿ ನೀಡಿರುವ ಪ್ರಕಾರ ಈ ವರೆಗೂ ಅಂದರೆ ಸೆಪ್ಟೆಂಬರ್7ರವರೆಗೂ 6,05,65,728 ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 11,36,613 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 97,894 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇನ್ನು ನಿನ್ನೆ ಒಂದೇ ದಿನ 1,132  ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ ಇದರೊಂದಿಗೆ ದೇಶದಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 83,198ಕ್ಕೆ ಏರಿಕೆಯಾಗಿದೆ. 

ಒಂದೇ ದಿನ 97,894 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 51,18,254ಕ್ಕೆ ಏರಿಕೆಯಾಗಿದೆ. 51,18,254ಕ್ಕೆ ಮಂದಿ ಸೋಂಕಿತರ ಪೈಕಿ 40,25,080 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನೂ 10,09,976  ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com