ಕೃಷಿ ಮಸೂದೆ ವಿರೋಧಿಸಿ ಮೋದಿ ಸಂಪುಟದಿಂದ ಹೊರಬಂದ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ 

ಕೇಂದ್ರ ಸರ್ಕಾರ ಮೊನ್ನೆಯಷ್ಟೇ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿದ್ದ ಹೊಸ ಕೃಷಿ ಮಸೂದೆಗೆ ಪಂಜಾಬ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಪರಿಣಾಮ ಕೇಂದ್ರ ಸಚಿವ ಸ್ಥಾನಕ್ಕೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ನೀಡಿದ್ದಾರೆ. 

ಎನ್ ಡಿಎ ಮಿತ್ರಪಕ್ಷವಾಗಿರುವ ಶಿರೋಮಣಿ ಅಕಾಲಿದಳ ಪಕ್ಷದ ಹರ್ಸಿಮ್ರತ್ ಕೌರ್ ಬಾದಲ್ ಅವರು ಆಹಾರ ಸಂಸ್ಕರಣೆ ಸಚಿವರಾಗಿದ್ದರು. ಈಗ ಕೃಷಿ ಮಸೂದೆಯನ್ನು ವಿರೋಧಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಶಿರೋಮಣಿ ಅಕಾಲಿದಳ ಎನ್ ಡಿಎಯ ಅತಿ ಪುರಾತನ ಮಿತ್ರಪಕ್ಷವಾಗಿದೆ. ಈಗ ಕೇಂದ್ರ ಸಚಿವ ಸ್ಥಾನ ತೊರೆದರೂ ಸಹ ಮೈತ್ರಿಕೂಟದಲ್ಲೇ ಮುಂದುವರೆಯುವುದಕ್ಕೆ ಎಸ್ಎಡಿ ನಿರ್ಧರಿಸಿದೆ. ಮಸೂದೆ ವಿರೋಧಿಸಿ ರೈತರೊಂದಿಗೆ ನಿಲ್ಲುವುದಕ್ಕೆ ಹೆಮ್ಮೆ ಇದೆ ಎಂದು ರಾಜೀನಾಮೆ ನೀಡಿದ ಬಳಿಕ ಕೌರ್ ಬಾದಲ್ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com