ಜನರು ಉದ್ಯೋಗವಿಲ್ಲದೆ ಎಷ್ಟು ದಿನಗಳವರೆಗೆ ಇರಬೇಕು: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

ನಿರುದ್ಯೋಗ ಪ್ರಮಾಣ ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಉದ್ಯೋಗ ಘನತೆಯಾಗಿದ್ದು, ಸರ್ಕಾರ  ಜನರಿಗೆ ಇನ್ನು ಎಷ್ಟು ದಿನಗಳವರೆಗೆ ಉದ್ಯೋಗವನ್ನು ನಿರಾಕರಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ನಿರುದ್ಯೋಗ ಪ್ರಮಾಣ ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಉದ್ಯೋಗ ಘನತೆಯಾಗಿದ್ದು, ಸರ್ಕಾರ  ಜನರಿಗೆ ಇನ್ನು ಎಷ್ಟು ದಿನಗಳವರೆಗೆ ಉದ್ಯೋಗವನ್ನು ನಿರಾಕರಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

ಉದ್ಯೋಗ ಕೋರಿ ಸುಮಾರು 1 ಕೋಟಿ ಜನರು ಸರ್ಕಾರದ ಪೋರ್ಟಲ್ ವೊಂದರಲ್ಲಿ ನೋಂದಾಯಿಸಿಕೊಂಡಿದ್ದಾರೆ. ಆದರೆ, ಕೇವಲ 1.77 ಲಕ್ಷ ಉದ್ಯೋಗ ಇರುವುದಾಗಿ ಮಾಧ್ಯಮವೊಂದರ ವರದಿಯನ್ನು ಟ್ವೀಟರ್ ನಲ್ಲಿ ಟ್ಯಾಗ್ ಮಾಡುವ ಮೂಲಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ.

ಮೋದಿ ಸರ್ಕಾರದ ಆರ್ಥಿಕ ನಿರ್ವಹಣೆಯನ್ನು ರಾಹುಲ್ ಗಾಂಧಿ ಟೀಕಿಸಿದ್ದು, ಯುವ ಜನಾಂಗಕ್ಕೆ ಉದ್ಯೋಗ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com