ದೆಹಲಿ ದಂಗೆ: ರಾಷ್ಟ್ರಪತಿ ಭೇಟಿ ಮಾಡಿದ ಪ್ರತಿಪಕ್ಷಗಳು, ಹಿಂಸಾಚಾರದಲ್ಲಿ ಪೊಲೀಸ್ ಪಾತ್ರದ ಬಗ್ಗೆ ತನಿಖೆಗೆ ಆಗ್ರಹ

ಪ್ರತಿಪಕ್ಷಗಳ ನಾಯಕರು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ, ಕಳೆದ ಫೆಬ್ರವರಿಯಲ್ಲಿ ರಾಷ್ಟ್ರರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಪೊಲೀಸರ ಪಾತ್ರದ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.
ಪ್ರತಿಪಕ್ಷಗಳ ನಾಯಕರಿಂದ ರಾಷ್ಟ್ರಪತಿ ಭೇಟಿ
ಪ್ರತಿಪಕ್ಷಗಳ ನಾಯಕರಿಂದ ರಾಷ್ಟ್ರಪತಿ ಭೇಟಿ

ನವದೆಹಲಿ: ಪ್ರತಿಪಕ್ಷಗಳ ನಾಯಕರು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ, ಕಳೆದ ಫೆಬ್ರವರಿಯಲ್ಲಿ ರಾಷ್ಟ್ರರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಪೊಲೀಸರ ಪಾತ್ರದ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಈ ಸಂಬಂಧ ರಾಷ್ಟ್ರಪತಿಗಳಿಗೆ ಸಲ್ಲಿಸಿದ ಜಂಟಿ ಮನವಿಯಲ್ಲಿ, ಗಲಭೆಗಳ ಕುರಿತು ದೆಹಲಿ ಪೊಲೀಸರು ನಡೆಸುತ್ತಿರುವ ತನಿಖೆಯ ಬಗ್ಗೆ ಪ್ರತಿಪಕ್ಷಗಳ ಮುಖಂಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಹಿಂಸಾಚಾರದ ಸಂದರ್ಭದಲ್ಲಿ ದೆಹಲಿ ಪೊಲೀಸರು ವಹಿಸಿದ ಪಾತ್ರದ ಬಗ್ಗೆ ತನಿಖೆಯಾಗಬೇಕು ಮತ್ತು ಸಿಎಎ / ಎನ್ಆರ್ಸಿ / ಎನ್ ಪಿಆರ್ ವಿರೋಧಿ ಚಳುವಳಿಗಳಲ್ಲಿ ಭಾಗವಹಿಸಿದ ಕಾರ್ಯಕರ್ತರು ಹಾಗೂ ಯುವಕರಿಗೆ ಪೊಲೀಸರು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಮತ್ತು ಅವರ ವಿರುದ್ಧ ಸುಳ್ಳು ಕೇಸ್ ಗಳನ್ನು ದಾಖಲಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಗಲಭೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದ್ದಾರೆ ಮತ್ತು ಅದರ ವಿಶೇಷ ಸೆಲ್ 53 ಮಂದಿ ಪ್ರಾಣ ಕಳೆದುಕೊಂಡ ದೆಹಲಿ ಗಲಭೆಯ ಹಿಂದಿನ ಪಿತೂರಿಯ ಬಗ್ಗೆ ತನಿಖೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com