ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖ

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಪತ್ತೆಯಾದ ಬೆನ್ನಲ್ಲೇ ಅದೇ ಅವಧಿಯಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಪತ್ತೆಯಾದ ಬೆನ್ನಲ್ಲೇ ಅದೇ ಅವಧಿಯಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 82,961 ಸೋಂಕಿತರು ಗುಣಮುಖರಾಗಿದ್ದಾರೆ. ಇದು ಈ ವರೆಗಿನ ಒಂದು ದಿನದ ಗರಿಷ್ಠ ಚೇತರಿಕೆ ಪ್ರಮಾಣವಾಗಿದೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 40,25,080ಕ್ಕೆ ಏರಿಕೆಯಾಗಿದೆ.  ಅಂತೆಯೇ ದೇಶದ ಒಟ್ಟಾರೆ ಚೇತರಿಕೆ ಪ್ರಮಾಣ ಕೂಡ ಏರಿಕೆಯಾಗಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ ಪ್ರಸ್ತುತ ಶೇ.78.53ಕ್ಕೆ ಏರಿಕೆಯಾಗಿದೆ.

ನಿನ್ನೆಯ ಒಟ್ಟಾರೆ ಚೇತರಿಕೆ ಕಂಡ ಸೋಂಕಿತರ ಪ್ರಮಾಣದ ಪೈಕಿ ಮಹಾರಾಷ್ಟ್ರ (19, 423 ಚೇತರಿಕೆ ಕಂಡ ಸೋಂಕಿತರು); ಮತ್ತು ಆಂಧ್ರಪ್ರದೇಶ (9,628 ಚೇತರಿಕೆ ಕಂಡ ಸೋಂಕಿತರು), ಕರ್ನಾಟಕ (7,406ಚೇತರಿಕೆ ಕಂಡ ಸೋಂಕಿತರು), ಉತ್ತರ ಪ್ರದೇಶ (6,680ಚೇತರಿಕೆ ಕಂಡ ಸೋಂಕಿತರು) ಮತ್ತು  ತಮಿಳುನಾಡು (5,735 ಚೇತರಿಕೆ ಕಂಡ ಸೋಂಕಿತರು) ಈ ಐದು ರಾಜ್ಯಗಳ ಪಾಲೇ ಷೇ.59ರಷ್ಟು ಎಂದು ತಿಳಿದುಬಂದಿದೆ. ಅಂತೆಯೇ ದೇಶದ ಇತರೆ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಚೇತರಿಕೆ ಪ್ರಮಾಣ ಶೇ.70ಕ್ಕಿಂತ ಹೆಚ್ಚಿದೆ. 

ಅಂತೆಯೇ ದೇಶದ ಒಟ್ಟಾರೆ ಸಕ್ರಿಯ ಪ್ರಕರಣಗಳ ಪೈಕಿ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು ಈ ಐದು ರಾಜ್ಯಗಳಲ್ಲೇ ಶೇ.60 ರಷ್ಟು ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 20 ಸಾವಿರಕ್ಕೂ ಅಧಿಕ ಹೊಸ ಸೋಂಕಿತರು ಪತ್ತೆಯಾಗಿದ್ದು,  ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ (8,846) ಮತ್ತು ಕರ್ನಾಟಕ (7,576) ರಾಜ್ಯಗಳಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com