ಪ್ರಕಾಶ್ ಜಾವಡೇಕರ್, ಧರ್ಮೇಂದ್ರ ಪ್ರಧಾನ್ ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

ನವದೆಹಲಿ ಭೇಟಿಯಲ್ಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಕೇಂದ್ರ ಪರಿಸರ , ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಪ್ರಕಾಶ್ ಜಾವಡೇಕರ್, ಧರ್ಮೇಂದ್ರ ಪ್ರಧಾನ್ ಜೊತೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಪ್ರಕಾಶ್ ಜಾವಡೇಕರ್, ಧರ್ಮೇಂದ್ರ ಪ್ರಧಾನ್ ಜೊತೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ನವದೆಹಲಿ:ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಕೇಂದ್ರ ಪರಿಸರ , ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

ಮೊದಲಿಗೆ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ, ಮೇಕೆದಾಟು, ಕಳಸಾ ಬಂಡೂರಿ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು.

ನಂತರ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಹೂಡಿಕೆ ಹಿಂತೆಗೆತ 
ಕುರಿತು ಚರ್ಚೆ ನಡೆಸಿದರು.

ಈ ಎರಡೂ ಸಂದರ್ಭಗಳಲ್ಲಿಯೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com