ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಪ್ರದಾನಿ ನರೇಂದ್ರ ಮೋದಿ ಸರ್ಕಾರ ತರುತ್ತಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ಕೇಂದ್ರ ಸಚಿವೆ ಮತ್ತು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಲೋಕಸಭಾ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.
ಹರ್ಸಿಮ್ರತ್ ಕೌರ್ ಬಾದಲ್
ಹರ್ಸಿಮ್ರತ್ ಕೌರ್ ಬಾದಲ್

ದೆಹಲಿ: ಪ್ರದಾನಿ ನರೇಂದ್ರ ಮೋದಿ ಸರ್ಕಾರ ತರುತ್ತಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ಕೇಂದ್ರ ಸಚಿವೆ ಮತ್ತು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಲೋಕಸಭಾ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.

ನರೇಂದ್ರ ಸಿಂಗ್ ತೋಮಾರ್ ಅವರಿಗೆ ಆಹಾರ ಸಂಸ್ಕರಣಾ ಕೈಗಾರಿಕೆಗಳ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಕ್ಷಣದಿಂದಲೇ ಜಾರಿಗೆ ಬರುವಂತೆ ಬಾದಲ್ ಅವರ ರಾಜಿನಾಮೆ ಅಂಗೀಕರಿಸಿದ್ದಾರೆ. ಜೊತೆಗೆ ಪ್ರಧಾನಿ ಅವರ ಸಲಹೆ ಮೇರೆಗೆ ತೋಮಾರ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿದ್ದಾರೆ.

ಕೇಂದ್ರ ಸರ್ಕಾರ ಮೊನ್ನೆಯಷ್ಟೇ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿದ್ದ ಹೊಸ ಕೃಷಿ ಮಸೂದೆಗೆ ಪಂಜಾಬ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಪರಿಣಾಮ ಕೇಂದ್ರ ಸಚಿವ ಸ್ಥಾನಕ್ಕೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ನೀಡಿದ್ದರು.  ಎನ್ ಡಿಎ ಮಿತ್ರಪಕ್ಷವಾಗಿರುವ ಶಿರೋಮಣಿ ಅಕಾಲಿದಳ ಪಕ್ಷದ ಹರ್ಸಿಮ್ರತ್ ಕೌರ್ ಬಾದಲ್ ಅವರು ಆಹಾರ ಸಂಸ್ಕರಣೆ ಸಚಿವರಾಗಿದ್ದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com