'ಮೃತ ಆರೋಗ್ಯ ಸಿಬ್ಬಂದಿಗಳ ದತ್ತಾಂಶ ಇಲ್ಲ ಹೇಳಿಕೆ', ಕೋವಿಡ್ ವಾರಿಯರ್ಸ್ ಗೆ ಅಪಮಾನ ಮಾಡಬೇಡಿ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಕೊರೋನಾ ನಿರ್ವಹಣೆ ವಿಚಾರವಾಗಿ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋವಿಡ್ ವಾರಿಯರ್ಸ್ ಗೆ ಅಪಮಾನ ಮಾಡಬೇಡಿ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕೊರೋನಾ ನಿರ್ವಹಣೆ ವಿಚಾರವಾಗಿ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋವಿಡ್ ವಾರಿಯರ್ಸ್ ಗೆ ಅಪಮಾನ ಮಾಡಬೇಡಿ ಎಂದು ಹೇಳಿದ್ದಾರೆ.

ಈ ಹಿಂದೆ ರಾಜ್ಯಸಭೆಯಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಅಶ್ವಿನಿ ಚೌಬೆ ಅವರು, ಆರೋಗ್ಯ ಇಲಾಖೆ ರಾಜ್ಯ ಸರ್ಕಾರಗಳ ವಿಚಾರವಾಗಿದ್ದು, ಕೊರೋನಾ ಸೋಂಕಿನಿಂದ ಮೃತಪಟ್ಟ ಆರೋಗ್ಯ ಸಿಬ್ಬಂದಿಗಳ ದತ್ತಾಂಶವನ್ನು ಕೇಂದ್ರೀಯವಾಗಿ ನಿರ್ವಹಣೆ ಮಾಡಿಲ್ಲ. ಅಂತಹ ಯಾವುದೇ ದತ್ತಾಂಶ ಕೇಂದ್ರ ಸರ್ಕಾರದ  ಬಳಿ ಇಲ್ಲ. ಕೋವಿಡ್ ಸಾಂಕ್ರಾಮಿಕದಲ್ಲಿ ಕರ್ತವ್ಯದಲ್ಲಿ ಪಾಲ್ಗೊಂಡು ಸೋಂಕಿಗೆ ತುತ್ತಾಗಿ ಸಾವಿಗೀಡಾರುವ ವೈದ್ಯರು, ದಾದಿಯರು, ಸಹಾಯಕ ಸಿಬ್ಬಂದಿ ಮತ್ತು ಆಶಾ ಕಾರ್ಮಿಕರು ಸೇರಿದಂತೆ ಆರೋಗ್ಯ ಸಿಬ್ಬಂದಿಗಳ ದತ್ತಾಂಶ ತಮ್ಮ ಬಳಿ ಇಲ್ಲ ಎಂದು ಹೇಳಿದ್ದರು.

ಇದೀಗ ಕೇಂದ್ರ ಸಚಿವರ ಈ ಹೇಳಿಕೆಗೆ ವಿರೋಧ ಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಕೋವಿಡ್ ಸಾಂಕ್ರಾಮಿಕದ ವಿರುದ್ಧ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ವಾರಿಯರ್ಸ್ ಕುರಿತ ಭದ್ರತೆ ಮತ್ತು ಗೌರವ ಸರ್ಕಾರದ  ಕರ್ತವ್ಯವಾಗಿರುತ್ತದೆ. ತಟ್ಟೆ ಬಡಿದು, ದೀಪ ಬೆಳಗಿದರೆ ಕೊರೋನಾ ಸೋಲಿಸಲು ಸಾಧ್ಯವಿಲ್ಲ. ಕೋವಿಡ್ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಗಳನ್ನು ಗೌರವಿಸಬೇಕು. ಮೋದಿ ಸರ್ಕಾರ ಕೊರೋನಾ ವಾರಿಯರ್ಸ್ ಗಳನ್ನು ಅವಮಾನಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಇನ್ನು ಈ ರಾಹುಲ್ ಗಾಂಧಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಚೌಬೆ, ಕೇಂದ್ರ ಸರ್ಕಾರ ಕೋವಿಡ್ ವಾರಿಯರ್ಸ್ ಗಳನ್ನು ಗೌರವಿಸುತ್ತದೆ. ಆರೋಗ್ಯ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ವಿಮಾ ಸೌಲಭ್ಯ ಕಲ್ಪಿಸಿದೆ. ಈ ಯೋಜನೆಯನ್ನು  ಕೇಂದ್ರ ಸರ್ಕಾರ ನಿರ್ವಹಣೆ ಮಾಡುತ್ತಿದ್ದು, ದೇಶಾದ್ಯಂತ 64 ವೈದ್ಯರೂ ಸೇರಿದಂತೆ 155 ವೈದ್ಯಕೀಯ ಸಿಬ್ಬಂದಿಗಳಿ ವಿಮಾ ಸೌಲಭ್ಯದಡಿಯಲ್ಲಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com