ಲವ್ ಜಿಹಾದ್ ವಿರುದ್ಧ ಸುಗ್ರೀವಾಜ್ಞೆ ಜಾರಿಗೆ ಯೋಗಿ ಸರ್ಕಾರ ಚಿಂತನೆ!

ಪ್ರೀತಿಯ ಹೆಸರಿನಲ್ಲಿ ಮತಾಂತರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯಬಿದ್ದರೆ ಸುಗ್ರೀವಾಜ್ಞೆಯೊಂದನ್ನು ಜಾರಿಗೆ ತರಲು ಕಾರ್ಯತಂತ್ರ ರೂಪಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Published: 18th September 2020 04:49 PM  |   Last Updated: 18th September 2020 04:49 PM   |  A+A-


CM_Yogi_Adhityanath1

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

Posted By : Nagaraja AB
Source : PTI

ಲಖನೌ: ಪ್ರೀತಿಯ ಹೆಸರಿನಲ್ಲಿ ಮತಾಂತರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯಬಿದ್ದರೆ ಸುಗ್ರೀವಾಜ್ಞೆಯೊಂದನ್ನು ಜಾರಿಗೆ ತರಲು ಕಾರ್ಯತಂತ್ರ ರೂಪಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿಗೆ ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಮಹಿಳೆಯರನ್ನು ಮತಾಂತರಗೊಳಿಸಿ ನಂತರ ಕ್ರೂರವಾಗಿ ಹಿಂಸಿಸಲಾಗುತ್ತಿದೆ. ಕೊಲೆ ಕೂಡಾ ಮಾಡಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ, ಸೂಕ್ತ ಕಾರ್ಯತಂತ್ರ ರೂಪಿಸುವಂತೆ ನಿರ್ದೇಶನ ನೀಡಿದ್ದಾರೆ. ಅಗತ್ಯವಿದ್ದರೆ, ಅದಕ್ಕಾಗಿ ಸುಗ್ರೀವಾಜ್ಞೆಯನ್ನು ಜಾರಿಗೆ ತರಬಹುದೆಂದು ಅವರು ಹೇಳಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ಇಂತಹ ಅಪರಾಧಗಳನ್ನು ಪರಿಶೀಲಿಸಿ ,ದುಷ್ಕರ್ಮಿಗಳ ವಿರುದ್ಧ ಪರಿಣಾಮಕಾರಿ ಕ್ರಮವನ್ನು ತೆಗೆದುಕೊಳ್ಳುವ ಗುರಿಯಿದೆ. ಇವೆಲ್ಲವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಲವ್ ಜಿಹಾದಿ ವರದಿಗಳ ಪರಿಶೀಲನೆಗಾಗಿ ಕಾನ್ಫುರದಲ್ಲಿ ಪೊಲೀಸರು ಇತ್ತೀಚಿಗೆ ವಿಶೇಷ ತನಿಖಾ ತಂಡವೊಂದನ್ನು ರಚಿಸಿದ್ದಾರೆ. ಕಳೆದ ವರ್ಷ ಉತ್ತರ ಪ್ರದೇಶ ಕಾನೂನು ಆಯೋಗ ಯೋಗಿ ಆದಿತ್ಯನಾಥ್ ಅವರಿಗೆ ವರದಿಯೊಂದನ್ನು ನೀಡಿ, ಬಲವಂತವಾಗಿ ಮತಾಂತರವನ್ನು ತಡೆಗಟ್ಟಲು ಹೊಸ ಕಾನೂನನ್ನು ಜಾರಿಗೆ ಜಾರಲು ಸಲಹೆ ನೀಡಿತ್ತು.

ಉತ್ತರ ಪ್ರದೇಶ ಧಾರ್ಮಿಕ ಸ್ವಾತಂತ್ರ ಮಸೂದೆ 2019 ಕರಡು ಪ್ರತಿಯೊಂದಿಗೆ ವರದಿಯನ್ನು ಸಲ್ಲಿಸಲಾಗಿದೆ ಎಂದು ಕಾನೂನು ಆಯೋಗದ ಕಾರ್ಯದರ್ಶಿ ಸಪ್ನಾ ತ್ರಿಪಾಠಿ ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Covid-19_vaccine1

ಕೋವಿಡ್-19 ಲಸಿಕೆ ಅಂತಿಮವಾಗಿ ನಮಗೆ ಸಹಜ ಸ್ಥಿತಿಗೆ ಬರಲು ಸಹಾಯ ಮಾಡುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp