ಕೋವಿಡ್-19: ಭಾರತದಲ್ಲಿ ಒಂದೇ ದಿನ 93,337 ಹೊಸ ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 53 ಲಕ್ಷ, 85,619 ಮಂದಿ ಸಾವು

ದೇಶದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಒಂದೇ ದಿನ 93,337 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 53 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಒಂದೇ ದಿನ 93,337 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 53 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಇನ್ನು ಒಂದು ಕಳೆದ 24 ಗಂಟೆಗಳಲ್ಲಿ 1,247 ಮಂದಿ ಸಾವನ್ನಪ್ಪುವುದರೊಂದಿಗೆ ಮಹಾಮಾರಿ ವೈರಸ್ ಈವರೆಗೂ 85,619 ಮಂದಿಯನ್ನು ಬಲಿಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 

ಭಾರತದಲ್ಲಿ ಪ್ರಸ್ತುತ ಒಟ್ಟು ಸೋಂಕಿತರ ಸಂಖ್ಯೆ 53,08,015ಕ್ಕೆ ಏರಿಕೆಯಾಗಿದ್ದು, 53 ಲಕ್ಷ ಸೋಂಕಿತರ ಪೈಕಿ ಈವರೆಗೂ 42,08,432 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿ ಇನ್ನೂ 10,13,964 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ. 

ದೇಶಾದ್ಯಂತ 24 ಗಂಟೆಗಳಲ್ಲಿ 8,81,911 ಕೋವಿಡ್ ಪರೀಕ್ಷೆ, ಒಟ್ಟಾರೆ 6.24 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  8,81,911 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,81,911 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.18ರವರೆಗೂ 6,24, 54, 254 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com