ರಾಜ್ಯಸಭೆಯಲ್ಲಿ ಸಾಂಕ್ರಾಮಿಕ ರೋಗಗಳ ತಿದ್ದುಪಡಿ ಮಸೂದೆ ಅಂಗೀಕಾರ

ರಾಜ್ಯಸಭೆಯಲ್ಲಿ ಸಾಂಕ್ರಾಮಿಕ ರೋಗಗಳ ತಿದ್ದುಪಡಿ ಮಸೂದೆ 2020 ಅನ್ನು ಶನಿವಾರ ಅಂಗೀಕರಿಸಿಲಾಯಿತು.
ರಾಜ್ಯಸಭೆ
ರಾಜ್ಯಸಭೆ

ನವದೆಹಲಿ: ರಾಜ್ಯಸಭೆಯಲ್ಲಿ ಸಾಂಕ್ರಾಮಿಕ ರೋಗಗಳ ತಿದ್ದುಪಡಿ ಮಸೂದೆ 2020 ಅನ್ನು ಶನಿವಾರ ಅಂಗೀಕರಿಸಿಲಾಯಿತು.

ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು, ವೈದ್ಯಕೀಯ ಸಿಬ್ಬಂದಿ ವಿರುದ್ಧದ ಅಪರಾಧಗಳನ್ನು ತಡೆಗಟ್ಟಲು ಈ ಮಸೂದೆಯ ಅಗತ್ಯವಿದೆ ಎಂದರು.

ಕೋವಿಡ್-19 ವಿರುದ್ಧ ಹೋರಾಡುತ್ತಿರುವ ವೈದ್ಯರು, ಅರೆವೈದ್ಯರು ಸೇರಿದಂತೆ ಅನೇಕ ಆರೋಗ್ಯ ಕಾರ್ಯಕರ್ತರನ್ನು ಯಾವುದೋ ಒಂದು ರೂಪದಲ್ಲಿ ಅವಮಾನಿಸಲಾಯಿತು. ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ, ವೈದ್ಯಕೀಯ ಸಿಬ್ಬಂದಿಯ ರಕ್ಷಣೆಗೆ ಕಾನೂನಿನ ಅವಶ್ಯಕತೆಯಿದೆ ಎಂದು ಅರಿತು ಸಾಂಕ್ರಾಮಿಕ ರೋಗಗಳ ಮಸೂದೆಗೆ ತಿದ್ದುಪಡಿ ತಂದಿದೆ ಎಂದು ಹರ್ಷವರ್ಧನ್ ಅವರು ತಿಳಿಸಿದರು.

ವೈದ್ಯಕೀಯ ವೃತ್ತಿಪರರನ್ನು ಅವಮಾನಿಸುವ ಅಥವಾ ನೋಯಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿದೆ ಎಂದು ಅವರು ತಿಳಿಸಿದರು.

ಆದಾಗ್ಯೂ, ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದ ಡೆರೆಕ್ ಒ'ಬ್ರಿಯೆನ್, ಈ ಮಸೂದೆ ರಾಜ್ಯಗಳಿಗೆ ಸಾಂವಿಧಾನಿಕವಾಗಿ ನಿಯೋಜಿಸಲಾದ ಕಾರ್ಯಗಳನ್ನು ಅತಿಕ್ರಮಿಸುವ ಪ್ರಯತ್ನ ಎಂದು ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com