ಸೇನಾ ಕ್ಯಾಂಟೀನ್ ಗಳಲ್ಲಿ ಕೇವಲ ಸ್ವದೇಶಿ ಉತ್ಪನ್ನಗಳ ಮಾರಾಟದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸರ್ಕಾರ

ದೇಶಾದ್ಯಂತ ನಡೆಸಲಾಗುತ್ತಿರುವ ಸೇನಾ ಕ್ಯಾಂಟೀನ್ ಗಳಲ್ಲಿ ಕೇವಲ ಸ್ವದೇಶಿ  ಉತ್ಪನ್ನಗಳ ಮಾರಾಟದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸರ್ಕಾರ ಶನಿವಾರ ಹೇಳಿದೆ. ಈ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರಕ್ಷಣಾ ಖಾತೆ ಸಹಾಯಕ ಸಚಿವ ಶ್ರೀಪಾದ್ ನಾಯಕ್ ರಾಜ್ಯಸಭೆಯಲ್ಲಿ ಹೇಳಿದರು.
ಕೇಂದ್ರ ರಕ್ಷಣಾ ಖಾತೆ ಸಹಾಯಕ ಸಚಿವ ಶ್ರೀಪಾದ್ ನಾಯಕ್
ಕೇಂದ್ರ ರಕ್ಷಣಾ ಖಾತೆ ಸಹಾಯಕ ಸಚಿವ ಶ್ರೀಪಾದ್ ನಾಯಕ್

ನವದೆಹಲಿ: ದೇಶಾದ್ಯಂತ ನಡೆಸಲಾಗುತ್ತಿರುವ ಸೇನಾ ಕ್ಯಾಂಟೀನ್ ಗಳಲ್ಲಿ ಕೇವಲ ಸ್ವದೇಶಿ  ಉತ್ಪನ್ನಗಳ ಮಾರಾಟದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸರ್ಕಾರ ಶನಿವಾರ ಹೇಳಿದೆ. ಈ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರಕ್ಷಣಾ ಖಾತೆ ಸಹಾಯಕ ಸಚಿವ ಶ್ರೀಪಾದ್ ನಾಯಕ್ ರಾಜ್ಯಸಭೆಯಲ್ಲಿ ಹೇಳಿದರು.

ಸ್ವಾವಲಂಬನೆ ಮತ್ತು ಸ್ಥಳೀಯ ಉತ್ಪನ್ನಗಳಿಗೆ ನಾವು ಧ್ವನಿಯಾಗಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಗಮನ ಕೇಂದ್ರೀಕರಿಸಿರುವ ಹಿನ್ನೆಲೆಯಲ್ಲಿ ರಕ್ಷಣಾ ಸಚಿವಾಲಯವು ತನ್ನ ಮಳಿಗೆಗಳಲ್ಲಿ "ಮೇಡ್ ಇನ್ ಇಂಡಿಯಾ" ಉತ್ಪನ್ನಗಳನ್ನು ಮಾತ್ರ ಬಳಸುವುದನ್ನು ಮತ್ತು ಮಾರಾಟ ಮಾಡುವುದನ್ನು ಪರಿಗಣಿಸುತ್ತದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.

2017-18ರಲ್ಲಿ ರಕ್ಷಣಾ ಕ್ಯಾಂಟೀನ್‌ಗಳ ಒಟ್ಟು ವಹಿವಾಟು 17,190 ಕೋಟಿ ರೂ.ಗಳಾಗಿದ್ದು, 2018-19ರಲ್ಲಿ ಇದು 18,917 ಕೋಟಿ ರೂ.ಗೆ ಏರಿದೆ ಎಂದು ನಾಯಕ್ ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ. 2019-20ರಲ್ಲಿ ಒಟ್ಟಾರೇ ವಹಿವಾಟು 17. 588 ಕೋಟಿ ಆಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಆಗಸ್ಟ್ ವರೆಗೂ 3. 689 ಕೋಟಿ ದಾಖಲಾಗಿದೆ ಎಂದು ಅವರು ಅಂಕಿ ಅಂಶವನ್ನು ನೀಡಿದರು.

37 ವಾಯುನೆಲೆಗಳನ್ನು ಆಧುನೀಕರಿಸಲು ಸರ್ಕಾರವು ಖಾಸಗಿ ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆಯೇ ಎಂಬ ಪ್ರತ್ಯೇಕ ಪ್ರಶ್ನೆಗೆ, ಪ್ರೋತ್ಸಾದಾಯಕ ಹೇಳಿಕೆ ನೀಡಿದ ಸಚಿವರು,  ವಾಯುನೆಲೆ ಆಧುನೀಕರಣದಿಂದ ರಾತ್ರಿ ಕಾರ್ಯಾಚರಣೆ ಸೇರಿದಂತೆ ಹದಗೆಟ್ಟ ಹವಾಮಾನ ಪರಿಸ್ಥಿತಿಯಲ್ಲಿ  ಕಾರ್ಯಾಚರಣೆ ಸಾಮರ್ಥ್ಯ, ಸಂಚಾರ ದಟ್ಟಣೆ ನಿರ್ವಹಣೆ ಸಾಮರ್ಥ್ಯವನ್ನು ಹೆಚ್ಚಿಸಲಿದೆ ಎಂದು ಹೇಳಿದರು.

ದೇಶದಲ್ಲಿ 86 ಮಿಲಿಟರಿ ವಾಯುನೆಲೆಗಳು ಕಾರ್ಯನಿರ್ವಹಿಸುತ್ತಿರುವುದಾಗಿ ಮತ್ತೋಂದು ಪ್ರಶ್ನೆಗೆ ನಾಯಕ್ ಪ್ರತಿಕ್ರಿಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com