ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯನ್ನೇ ಹಿಂದಿಕ್ಕಿದ ಗುಣಮುಖರ ಸಂಖ್ಯೆ

ಮಾರಕ ಕೊರೋನಾ ವೈರಸ್ ನಿಂದ ತತ್ತರಿಸುತ್ತಿರುವ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾದ ಸೋಂಕಿತರ ಸಂಖ್ಯೆಗಿಂತ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ನಿಂದ ತತ್ತರಿಸುತ್ತಿರುವ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾದ ಸೋಂಕಿತರ ಸಂಖ್ಯೆಗಿಂತ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ.

ಹೌದು.. ಕಳೆದ 24 ಗಂಟೆಗಳಲ್ಲಿ ಅವಧಿಯಲ್ಲಿ ದೇಶದಲ್ಲಿ 92,605 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 54 ಲಕ್ಷ ಗಡಿ ದಾಟಿದೆ. ಅಂತೆಯೇ 1,133 ಮಂದಿ ಸಾವನ್ನಪ್ಪಿದ್ದು, ಆ  ಮೂಲಕ ಕೊರೋನಾ ವೈರಸ್ ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 86,752ಕ್ಕೆ ಏರಿಕೆಯಾಗಿದೆ.

ದೇಶದಲ್ಲಿನ ಒಟ್ಟಾರೆ ಸೋಂಕಿತರ ಪೈಕಿ ಕಳೆದ 24 ಗಂಟೆಗಳಲ್ಲಿ 94,612 ಮಂದಿ ಸೋಂಕಿತರು ಗುಣಮುಖರಾಗಿದ್ದು, ಇದು ದೇಶದಲ್ಲಿ ಹೊಸ ಸೋಂಕಿತರ ಸಂಖ್ಯೆಗಿಂತ ಹೆಚ್ಚಾಗಿದೆ. ಆ ಮೂಲಕ ದೇಶದಲ್ಲಿನ ಸೋಂಕಿನಿಂದ ಗುಣಮುಖರಾದ ಒಟ್ಟಾರೆ ಗುಣಮುಖರ ಸಂಖ್ಯೆ 43,03,044ಕ್ಕೆ ಏರಿಕೆಯಾಗಿದೆ. ಇನ್ನು  ದೇಶದಲ್ಲಿ ಇನ್ನೂ 10,10,824 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com