ಕೋವಿಡ್-19 ಗುಣಮುಖರ ಪ್ರಮಾಣದಲ್ಲಿ ಅಮೆರಿಕವನ್ನು ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಭಾರತ!

ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೋವಿಡ್-19 ಸೋಂಕಿನಿಂದ ಗುಣಮುಖರಾದವರ ಪಟ್ಟಿಯಲ್ಲಿ ಇದೀಗ ಭಾರತ ಅಗ್ರಸ್ಥಾನಕ್ಕೇರಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೋವಿಡ್-19 ಸೋಂಕಿನಿಂದ ಗುಣಮುಖರಾದವರ ಪಟ್ಟಿಯಲ್ಲಿ ಇದೀಗ ಭಾರತ ಅಗ್ರಸ್ಥಾನಕ್ಕೇರಿದೆ.

ಹೌದು.. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿಗೆ ತುತ್ತಾದವರ ಪೈಕಿ ಅತಿ ಹೆಚ್ಚು ಮಂದಿ ಭಾರತದಲ್ಲಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಭಆರತ ಅಮೆರಿಕವನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ ಇದೀಗ ಅಗ್ರಸ್ಥಾನಕ್ಕೇರಿದೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಅನ್ವಯ ದೇಶದಲ್ಲಿ ಈ ವರೆಗೂ ಸೋಂಕಿನಿಂದ 43ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದು, ಇದು ಜಗತ್ತಿನಲ್ಲೇ ಅತೀ ಹೆಚ್ಚು ಪ್ರಮಾಣದ ಗುಣಮುಖರ ಸಂಖ್ಯೆಯಾಗಿದೆ.

ಅರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಪ್ರಸ್ತುತ 43, 14, 606 ಮಂದಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದು, ಜಾಗತಿಕ ಒಟ್ಟಾರೆ ಕೋವಿಡ್ ಸೋಂಕಿತರ ಪೈಕಿ ಭಾರತದಲ್ಲಿ ಶೇ.19.00ರಷ್ಟು ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ಅಥೀ ಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಈ ವರೆಗೂ 42, 25, 993 ಮಂದಿ ಸೋಂಕಿತರು ಗುಣಮುಖರಾಗಿದ್ದು, ಜಾಗತಿಕವಾಗಿ ಅಮೆರಿಕದ ಚೇತರಿಕೆ ಪ್ರಮಾಣ ಶೇ.18.70ರಷ್ಟಿದೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 38, 20, 095 ಮಂದಿ ಸೋಂಕಿತರು ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ.16.90ರಷ್ಟಿದೆ. ರಷ್ಯಾದಲ್ಲಿ 9, 09, 357 ಮಂದಿ ಸೋಂಕಿತರು ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ.4.00ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯಷ್ಟೇ ಭಾರತದಲ್ಲಿ ದಾಖಲೆಯ 94,612 ಮಂದಿ ಸೋಂಕಿತರು ಗುಣಮುಖರಾಗಿದ್ದರು. ಇದು ನಿನ್ನೆಯ ಹೊಸ ಸೋಂಕಿತರ ಸಂಖ್ಯೆಗಿಂತ ಹೆಚ್ಚು. ನಿನ್ನೆ 92,605 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿತ್ತು. ಆ ಮೂಲಕ ದೇಶದಲ್ಲಿನ ಸೋಂಕಿನಿಂದ ಗುಣಮುಖರಾದ ಒಟ್ಟಾರೆ ಗುಣಮುಖರ ಸಂಖ್ಯೆ 43,03,044ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಇನ್ನೂ 10,10,824 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ. 

ಇನ್ನು ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 54 ಲಕ್ಷ ಗಡಿ ದಾಟಿದೆ. ಅಂತೆಯೇ 1,133 ಮಂದಿ ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ವೈರಸ್ ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 86,752ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com