ಸಾರ್ವಜನಿಕವಾಗಿ ಮಾಸ್ಕ್ ಧರಿಸದ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಗೆ 1 ಸಾವಿರ ರೂ. ದಂಡ

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಸಾರ್ವಜನಿಕವಾಗಿ ಮಾಸ್ಕ್ ಧರಿಸುವುದು ಕಡ್ಡಾಯ. ಆದರೆ ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಮಹಾರಾಷ್ಟ್ರ ನವ ನಿರ್ಮಾಣ ಸೇನಾ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
ರಾಜ್ ಠಾಕ್ರೆ
ರಾಜ್ ಠಾಕ್ರೆ

ಮುಂಬೈ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಸಾರ್ವಜನಿಕವಾಗಿ ಮಾಸ್ಕ್ ಧರಿಸುವುದು ಕಡ್ಡಾಯ. ಆದರೆ ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಮಹಾರಾಷ್ಟ್ರ ನವ ನಿರ್ಮಾಣ ಸೇನಾ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಕಳೆದ ಶುಕ್ರವಾರ ಮುಂಬೈ ರೋ-ರೋ ಸರ್ವಿಸ್ ಗೆ ತೆರಳಿದ್ದ ರಾಜ್ ಠಾಕ್ರೆ ಅವರು ಮಾಸ್ಕ್ ಧರಿಸಿರಲಿಲ್ಲ. ಸಾರ್ವಜನಿಕರು ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು 1 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ದಂಡ ಪಾವತಿಸಿದ ರಾಜ್ ಠಾಕ್ರೆ ಅವರು, ತಾವು ಮಾಸ್ಕ್ ಧರಿಸದಿರುವುದಕ್ಕೆ ಮತ್ತು ಸಿಗರೇಟ್ ಸೇವಿಸಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com