ಕೋವಿಡ್-19: ಭಾರತದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆ!

ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 90 ಸಾವಿರಕ್ಕೂ ಹೆಚ್ಚು ದಾಖಲಾಗಿದ್ದು, ಕಳೆದ 24ಗಂಟೆಗಳಲ್ಲಿ 93, 356 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಭಾರತ ಜಗತ್ತಿನಲ್ಲೇ ಅತೀ ಹೆಚ್ಚು ಗುಣಮುಖ ಸೋಂಕಿತರನ್ನು ಹೊಂದಿದೆ ದೇಶವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸೆಪ್ಟೆಂಬರ್ 19ರಂದು 95, 880 ಮಂದಿ, ಸೆಪ್ಟೆಂಬರ್ 20ರಂದು 94, 612 ಮಂದಿ ಸೋಂಕಿತರು ಗುಣಮುಖರಾಗಿದ್ದರು. ಆ ಮೂಲಕ ದೇಶದಲ್ಲಿ ಗುಣಮುಖರ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಕೋವಿಡ್-19 ಸೋಂಕಿಗೆ ತುತ್ತಾದವರ ಪೈಕಿ ಅತಿ ಹೆಚ್ಚು ಮಂದಿ ಭಾರತದಲ್ಲಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಭಆರತ ಅಮೆರಿಕವನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ ಇದೀಗ ಅಗ್ರಸ್ಥಾನಕ್ಕೇರಿದೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ  ಅನ್ವಯ ದೇಶದಲ್ಲಿ ಈ ವರೆಗೂ ಸೋಂಕಿನಿಂದ 43ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದು, ಇದು ಜಗತ್ತಿನಲ್ಲೇ ಅತೀ ಹೆಚ್ಚು ಪ್ರಮಾಣದ ಗುಣಮುಖರ ಸಂಖ್ಯೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com