24 ಗಂಟೆಗಳಲ್ಲಿ ಭಾರತದಲ್ಲಿ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖ

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 1.01 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 1.01 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ.

ಹೌದು.. ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 1,01,468 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ದೇಶದಲ್ಲೇ ಒಂದು ದಿನದ ಗರಿಷ್ಠ ಗುಣಮುಖ ಸಂಖ್ಯೆಯಾಗಿದೆ. ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ  44,97,867ಕ್ಕೆ ಏರಿಕೆಯಾಗಿದೆ. 

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 75,083 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 55,62,664ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ ದೇಶಾದ್ಯಂತ 1,053 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ  ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 88,935ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 9,75,861 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆ!
ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 90 ಸಾವಿರಕ್ಕೂ ಹೆಚ್ಚು ದಾಖಲಾಗಿದ್ದು, ಭಾನುವಾರ 93, 356 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ನಿನ್ನೆ 1,01,468 ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ಭಾರತ ಜಗತ್ತಿನಲ್ಲೇ ಅತೀ ಹೆಚ್ಚು ಗುಣಮುಖರನ್ನು  ಹೊಂದಿದ ದೇಶವಾಗಿದೆ. ಅಂತೆಯೇ ದೇಶದಲ್ಲಿ ಕೊರೋನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80.89ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com