ಟ್ರಂಪ್ ಭೇಟಿ ವೇಳೆ ಕಡ್ಡಾಯ ಕೋವಿಡ್ ಪರೀಕ್ಷೆ ಅಗತ್ಯವಿರಲಿಲ್ಲ: ಕೇಂದ್ರ ಸರ್ಕಾರ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24ರಿಂದ 25ರವರೆಗಿನ ಭಾರತ ಭೇಟಿ ವೇಳೆಯಲ್ಲಿ ಕಡ್ಡಾಯ ಕೋವಿಡ್ ಪರೀಕ್ಷೆ ಅಗತ್ಯವಿರಲಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

Published: 22nd September 2020 10:50 PM  |   Last Updated: 23rd September 2020 12:37 PM   |  A+A-


Donald_Trump_PM_Modi1

ಡೊನಾಲ್ಡ್ ಟ್ರಂಪ್, ಪ್ರಧಾನಿ ಮೋದಿ

Posted By : Nagaraja AB
Source : PTI

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24ರಿಂದ 25ರವರೆಗಿನ ಭಾರತ ಭೇಟಿ ವೇಳೆಯಲ್ಲಿ ಕಡ್ಡಾಯ ಕೋವಿಡ್ ಪರೀಕ್ಷೆ ಅಗತ್ಯವಿರಲಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

ವಿದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಚ್ 4 ರಿಂದ ಕಡ್ಡಾಯವಾಗಿ ಕೋವಿಡ್-19 ತಪಾಸಣೆಗೊಳಪಡಿಸಲಾಗುತ್ತಿದೆ ಎಂದು ವಿದೇಶಾಂಗ ಖಾತೆ ಸಹಾಯಕ ಸಚಿವ ವಿ. ಮುರಳೀಧರನ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಟ್ರಂಪ್ ಭೇಟಿ ವೇಳೆಯಲ್ಲಿ ಅಮೆರಿಕಾ ಅಧ್ಯಕ್ಷರ ಸಿಬ್ಬಂದಿ ಮತ್ತು ನಿಯೋಗವನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತಾ? ಎಂಬ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಮಾರ್ಚ್ 11 ರಿಂದ ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಿತ್ತು. ವಿದೇಶಗಳಿಂದ ಬರುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಚ್ 4ರಿಂದ ಕೋವಿಡ್-19 ತಪಾಸಣೆಯನ್ನು ಕಡ್ಡಾಯಪಡಿಸಲಾಯಿತು ಎಂದು ಹೇಳಿದ್ದಾರೆ.

ಟ್ರಂಪ್  ಜೊತೆಯಲ್ಲಿ ಪ್ರಥಮ ಮಹಿಳೆ ಮೆಲಾನಿಯಾ , ಪುತ್ರಿ ಇವಾಂಕ, ಅಳಿಯ ಜಾರೆಡ್ ಕುಶ್ನೇರ್ ಹಾಗೂ ಅವರ ಆಡಳಿತದ ಉನ್ನತ ಅಧಿಕಾರಿಗಳು ಭಾರತ ಭೇಟಿ ಕೈಗೊಂಡಿದ್ದರು.

Stay up to date on all the latest ರಾಷ್ಟ್ರೀಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp