ರೈತರ ಖಾತೆಗೆ ನೇರವಾಗಿ 4 ಸಾವಿರ ರು. ನಗದು ಜಮಾವಣೆ: ಮಧ್ಯ ಪ್ರದೇಶ ಸರ್ಕಾರ ಘೋಷಣೆ

ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯ ಸರ್ಕಾರದ ವತಿಯಿಂದ 4 ಸಾವಿರ ರೂ.ಗಳನ್ನು ನೇರ ರೈತರ ಖಾತೆಗೆ ಎರಡು ಕಂತುಗಳಲ್ಲಿ ವರ್ಗಾವಣೆ ಮಾಡುವುದಾಗಿ ಘೋಷಿಸಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್

ಭೂಪಾಲ್: ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯ ಸರ್ಕಾರದ ವತಿಯಿಂದ 4 ಸಾವಿರ ರೂ.ಗಳನ್ನು ನೇರ ರೈತರ ಖಾತೆಗೆ ಎರಡು ಕಂತುಗಳಲ್ಲಿ ವರ್ಗಾವಣೆ ಮಾಡುವುದಾಗಿ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ದಾಖಲಿಸಿಕೊಂಡಿರುವ ರೈತರಿಗೆ ಯೋಜನೆಯ ಲಾಭ ದೊರೆಯಲಿದೆ. ರೈತರ ಒಟ್ಟಾರೆ ಅಭಿವೃದ್ಧಿಗಾಗಿ ಕಿಸಾನ್ ಸಮ್ಮನ್ ನಿಧಿ, ಶೂನ್ಯ ಬಡ್ಡಿ ದರದಲ್ಲಿ ಸಾಲ ಮತ್ತು ಪ್ರಧಾನಿ ಬೆಳೆ ವಿಮೆ ಮುಂತಾದ ಯೋಜನೆಗಳೊಂದಿಗೆ ರೈತರ ಹಿತದೃಷ್ಟಿಯಿಂದ ನಡೆಸಬೇಕೆಂದು ನಾವು ನಿರ್ಧರಿಸಿದ್ದು, ಎಲ್ಲಾ ಯೋಜನೆಗಳನ್ನು ವಿಶೇಷ ಪ್ಯಾಕೇಜ್ ಆಗಿ ಅನುಷ್ಠಾನ ಮಾಡುತ್ತೇವೆ ಎಂದು ಸಿಎಂ ಚೌಹಾಣ್ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರೈತ ಕಲ್ಯಾಣ ಯೋಜನೆಯನ್ನು ರಾಜ್ಯದಲ್ಲಿ ಪ್ರಾರಂಭಿಸಲಾಗುತ್ತಿದೆ. ಯೋಜನೆಯ ಅಡಿ ರೈತರಿಗೆ ವಾರ್ಷಿಕವಾಗಿ 4 ಸಾವಿರ ರೂ. ಪಾವತಿಸಲಾಗುವುದು. ರೈತರ ಕಲ್ಯಾಣ ನನ್ನ ಜೀವನದ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಸೆಪ್ಟಂಬರ್ 25 ರಂದು ದೀನ್ ದಯಾಳ್ ಉಪಾಧ್ಯಾಯ್ ಅವರ ಜನ್ಮ ದಿನಾಚರಣೆಯಿದ್ದು, ಈ ಯೋಜನೆಯಡಿ 77 ಲಕ್ಷ ರೈತರಿಗೆ ಸೌಲಭ್ಯ ಸಿಗಲಿದೆ. ರೈತರಿಗೆ ಶೂನ್ಯದರದಲ್ಲಿ ಸಾಲ ನೀಡುವ ಸಲುವಾಗಿ 800 ಕೋಟಿ ರು ಹಣವನ್ನು  ಸಹಕಾರ ಸಂಘಗಳಿಗೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com