ಶರದ್ ಪವಾರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಲು ಸೂಚನೆ ನೀಡಿಲ್ಲ: ಚುನಾವಣಾ ಆಯೋಗ 

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ( ಎನ್ ಸಿ ಪಿ) ಮುಖ್ಯಸ್ಥ ಶರದ್ ಪವಾರ್ ಅವರಿಗೆ ನೋಟೀಸ್ ನೀಡಬೇಕೆಂದು ತಾನು ಆದಾಯ ತೆರಿಗೆ ಇಲಾಖೆಗೆ ಸೂಚನೆ ನೀಡಿರಲಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಸ್ಪಷ್ಟಪಡಿಸಿದೆ. 
ಶರದ್ ಪವಾರ್
ಶರದ್ ಪವಾರ್

ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ( ಎನ್ ಸಿ ಪಿ) ಮುಖ್ಯಸ್ಥ ಶರದ್ ಪವಾರ್ ಅವರಿಗೆ ನೋಟೀಸ್ ನೀಡಬೇಕೆಂದು ತಾನು ಆದಾಯ ತೆರಿಗೆ ಇಲಾಖೆಗೆ ಸೂಚನೆ ನೀಡಿರಲಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಸ್ಪಷ್ಟಪಡಿಸಿದೆ. 

ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದ ಬಗ್ಗೆ ಕೆಲವು ವಿವರಣೆ ಕೋರಿ ಆದಾಯ ತೆರಿಗೆ  ಇಲಾಖೆ ತಮಗೆ ನೋಟೀಸ್ ನೀಡಿದೆಯೆಂದೂ ಶರದ್ ಪವಾರ್ ಸ್ವತಃ ಮಂಗಳವಾರ ಹೇಳಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಈ ಕುರಿತು ಸ್ಪಷ್ಟಪಡಿಸಿದೆ.

ಶರದ್ ಪವಾರ್ ಅವರಿಗೆ ನೋಟೀಸ್ ನೀಡಬೇಕೆಂದು ಆದಾಯ ತೆರಿಗೆ ಇಲಾಖೆಗೆ ನಾವು ಯಾವುದೇ ಸೂಚನೆ ನೀಡಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈ ಹಿಂದೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣಪತ್ರದ ಬಗ್ಗೆ ಕೆಲವು ವಿವರಣೆ ಕೋರಿ ತಮಗೆ ನೋಟೀಸ್ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದರು.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಸಚಿವ ಅದಿತ್ಯಠಾಕ್ರೆ ಹಾಗೂ ತಮ್ಮ ಮಗಳು ಸುಪ್ರಿಯಾ ಸುಳೆ ಅವರಿಗೂ ನೋಟೀಸ್ ಕಳುಹಿಸಲಾಗಿದ್ದು, ಆದಾಯ ತೆರಿಗೆ ಕೆಲವರ ಮೇಲೆ ಪ್ರೀತಿ ಹೆಚ್ಚು ಎಂದು ಪವಾರ್ ವ್ಯಂಗ್ಯವಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com