ಬಿ ಎಸ್ ಯಡಿಯೂರಪ್ಪ ಸೇರಿ 7 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚು ಕೇಸು ದಾಖಲಾಗಿರುವ ಕರ್ನಾಟಕ ಸೇರಿದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಆನ್'ಲೈನ್ ಸಭೆ ನಡೆಸಲಿದ್ದಾರೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚು ಕೇಸು ದಾಖಲಾಗಿರುವ ಕರ್ನಾಟಕ ಸೇರಿದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಆನ್'ಲೈನ್ ಸಭೆ ನಡೆಸಲಿದ್ದಾರೆ. 

ಈ ಸಭೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಅವರು ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ. 

ಬುಧವಾರದ ಸಭೆಯಲ್ಲಿ ಭಾಗಿಯಾಗಲಿರುವ ಇತರೆ ರಾಜ್ಯಗಳೆಂದರೆ ಮಹಾರಾಷ್ಟ್ರ, ಆಂಧ್ರಪ್ರದೇಶ, ಉತ್ತರಪ್ರದೇಶ, ತಮಿಳುನಾಡು, ದೆಹಲಿ ಮತ್ತು ಪಂಬಾಜ್ ಈ 7 ರಾಜ್ಯಗಳು ದೇಶದಲ್ಲಿ ಈ ವರೆಗೆ ಪತ್ತೆಯಾದ ಒಟ್ಟು ಪ್ರಕರಣಗಳಲ್ಲಿ ಶೇ.65.5, ಸಕ್ರಿಯ ಕೇಸಿನಲ್ಲಿ ಶೇ.63, ಸಾವಿನ ಪ್ರಮಾಣದಲ್ಲಿ ಶೇ.177ರಷ್ಟು ಪಾಲು ಹೊಂದಿವೆ. ಅದರಲ್ಲೂ ದೆಹಲಿ ಮತ್ತು ಪಂಜಾಬ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಮತ್ತೆ ಭಾರೀ ಪ್ರಮಾಣದಲ್ಲಿ ಹೊಸ ಕೇಸುಗಳು ಪತ್ತೆಯಾಗುತ್ತಿರುವುದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com