ರೈತ, ಕಾರ್ಮಿಕರ ವಿರೋಧಿ ಮಸೂದೆ ವಿರೋಧಿಸಿ ಸಂಸತ್ ಮುಂದೆ ಪ್ರತಿಪಕ್ಷಗಳಿಂದ ಪ್ರತಿಭಟನಾ ಮೆರವಣಿಗೆ

ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳನ್ನು ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಂಸದರು ಬುಧವಾರ ಸಂಸತ್ ಭವನ ಆವರಣದಲ್ಲಿ ಗಾಂಧಿ ಪ್ರತಿಮೆಯಿಂದ ಅಂಬೇಡ್ಕರ್ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

Published: 23rd September 2020 06:24 PM  |   Last Updated: 23rd September 2020 06:24 PM   |  A+A-


cong-mps

ಪ್ರತಿಪಕ್ಷಗಳ ಪ್ರತಿಭಟನೆ

Posted By : Lingaraj Badiger
Source : PTI

ನವದೆಹಲಿ: ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳನ್ನು ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಂಸದರು ಬುಧವಾರ ಸಂಸತ್ ಭವನ ಆವರಣದಲ್ಲಿ ಗಾಂಧಿ ಪ್ರತಿಮೆಯಿಂದ ಅಂಬೇಡ್ಕರ್ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರೈತರ ಕುರಿತ ಮಸೂದೆಗಳಲ್ಲಿ ತಿದ್ದುಪಡಿಗಳನ್ನು ಮತ್ತು ರಾಜ್ಯಸಭೆಯಲ್ಲಿ ಎಂಟು ಸದಸ್ಯರ ಅಮಾನತು ವಿರೋಧಿಸಿ ಪ್ರತಿಪಕ್ಷದ ಸದಸ್ಯರು ನಿನ್ನೆಯಿಂದ ಸದನವನ್ನು ಬಹಿಷ್ಕರಿಸಿದ್ದಾರೆ.

ಇಂದು ರೈತರನ್ನು,  ಕಾರ್ಮಿಕರನ್ನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ ಎಂಬ ಫಲಕ ಹಿಡಿದು ಮೌನ ಪ್ರತಿಭಟನೆ ನಡೆಸಿದರು. 

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ-ಎಂ, ಡಿಎಂಕೆ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಆಮ್ ಆದ್ಮಿ ಪಕ್ಷ (ಎಎಪಿ), ಸಮಾಜವಾದಿ ಪಕ್ಷ ಮತ್ತು ಎನ್‌ಸಿಪಿ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

"ಕಾಂಗ್ರೆಸ್ ನ ಎಲ್ಲ ಸಂಸದರು ಮತ್ತು ಸಮಾನ ಮನಸ್ಕ ಪಕ್ಷಗಳು ಸಂಸತ್ತಿನ ಗಾಂಧಿ ಪ್ರತಿಮೆಯಿಂದ ಅಂಬೇಡ್ಕರ್ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿವೆ. ಮೋದಿ ಸರ್ಕಾರವು ಅತ್ಯಂತ ಪ್ರಜಾಪ್ರಭುತ್ವ ವಿರೋಧಿ ರೀತಿಯಲ್ಲಿ ವರ್ತಿಸುತ್ತಿದೆ. ರಬ್ಬರ್ ಸ್ಟ್ಯಾಂಪ್ ಮಾಡಿರುವ ರೈತ ವಿರೋಧಿ, ಕಾರ್ಮಿಕ ವಿರೋಧಿ ಮಸೂದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದೇವೆ" ಎಂದು ಕಾಂಗ್ರೆಸ್ ಮುಖ್ಯ ಸಚೇತಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp