ದೇಶಾದ್ಯಂತ 24 ಗಂಟೆಗಳಲ್ಲಿ 11,56,569 ಕೋವಿಡ್ ಪರೀಕ್ಷೆ, ಒಟ್ಟಾರೆ 6.74 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  11,56,569 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  11,56,569 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11,56,569 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.23 ರವರೆಗೂ 6,74,36,031 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 86,508 ಹೊಸ ಕೇಸ್'ಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5,732,519ಕ್ಕೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com