ದಕ್ಷಿಣ ಗುಜರಾತ್ ಒಎನ್‌ಜಿಸಿ ಅನಿಲ ಸ್ಥಾವರದಲ್ಲಿ ಸ್ಫೋಟದ ನಂತರ ಭಾರೀ ಬೆಂಕಿ: ಸಾವು-ನೋವು ವರದಿ ಇಲ್ಲ

ಸೂರತ್'ನ ಹಾಜಿರಾದಲ್ಲಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ದ ಸ್ಥಾವರದಲ್ಲಿ ಗುರುವಾರ ಕನಿಷ್ಠ ಮೂರು ಸ್ಫೋಟಗಳು ಸಂಭವಿಸಿದ ನಂತರ ಭಾರಿ ಬೆಂಕಿ ಕಾಣಿಸಿಕೊಂಡಿದೆ.

Published: 24th September 2020 10:20 AM  |   Last Updated: 24th September 2020 10:21 AM   |  A+A-


File photo

ಸಂಗ್ರಹ ಚಿತ್ರ

Posted By : manjula
Source : UNI

ಸೂರತ್: ಸೂರತ್'ನ ಹಾಜಿರಾದಲ್ಲಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ದ ಸ್ಥಾವರದಲ್ಲಿ ಗುರುವಾರ ಕನಿಷ್ಠ ಮೂರು ಸ್ಫೋಟಗಳು ಸಂಭವಿಸಿದ ನಂತರ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಇಂದು ಬೆಳಗಿನ ಜಾವ ಸುಮಾರು 3 ಗಂಟೆಗೆ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದೆ. ಈ ಪ್ರದೇಶದಲ್ಲಿ ತುರ್ತುಸ್ಥಿತಿ ಘೋಷಿಸಲಾಗಿದ್ದು, ಬೆಂಕಿ ನಿಯಂತ್ರಣ ಕಾರ್ಯಾಚರಣೆಗಳು ತಕ್ಷಣವೇ ಆರಂಭವಾಗಿವೆ ಎಂದು ಜಿಲ್ಲಾಧಿಕಾರಿ ಧವಲ್ ಪಟೇಲ್ ತಿಳಿಸಿದ್ದಾರೆ.

ಈ ಮಧ್ಯೆ, ಒಎನ್‌ಜಿಸಿ ಸಹ ಹಜೀರಾ ಅನಿಲ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಟ್ವೀಟ್ ಮಾಡಿದೆ. 'ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ.’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಲಾಗಿದೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp