ಜಮ್ಮು-ಕಾಶ್ಮೀರ, ಲಡಾಖ್ ಪ್ರದೇಶಗಳ ಸೇರಿದಂತೆ 43 ಮಹತ್ವದ ಸೇತುವೆ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಮಹತ್ವದ 17 ಹೊಸ ಸೇತುವೆಗಳು ಸೇರಿದಂತೆ ಸೇರಿದಂತೆ ಏಳು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 43 ಸೇತುವೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಮುಂದೂಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ನವದೆಹಲಿ: ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಮಹತ್ವದ 17 ಹೊಸ ಸೇತುವೆಗಳು ಸೇರಿದಂತೆ ಸೇರಿದಂತೆ ಏಳು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 43 ಸೇತುವೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಮುಂದೂಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ 47 ಹೊಸ ಸೇತುವೆಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಲಿದ್ದರು. ಆದರೆ, ಕೇಂದ್ರ ಸಚಿವ ಸುರೇಶ್ ಅಂಗಡಿಯವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಸಂತಾಪ ಸೂಚಿಸುವ ಸಲುವಾಗಿ ಕಾರ್ಯಕ್ರಮವನ್ನುಮುಂದೂಡಲಾಗಿದೆ ಎಂದು ತಿಳಿದುಬಂದಿದೆ. 

ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ 17 ಹೊಸ ಸೇತುವೆ ಸೇರಿದಂತೆ 7 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 43 ಸೇತುವೆಗಳನ್ನು ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ) ನಿರ್ಮಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com