ಅವಂತಿಪೋರಾದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.
Published: 24th September 2020 10:11 AM | Last Updated: 24th September 2020 10:48 AM | A+A A-

ಸಂಗ್ರಹ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.
ಅವಂತಿಪೋರಾದ ತ್ರಾಲ್ ನಲ್ಲಿರುವ ಮಗಾಮ ಎಂಬ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ, ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
ಈ ನಡುವೆ ಪುಲ್ವಾಮಾದಲ್ಲಿ ಸೇನಾಪಡೆಗಳು ಎನ್'ಕೌಂಟರ್ ನಡೆಸಿದ್ದು, ಉಗ್ರನೋರ್ವನನ್ನು ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿದೆ.