ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್: ಸೇನಾಪಡೆ ಗುಂಡಿಗೆ ಇಬ್ಬರು ಎಲ್ಇಟಿ ಉಗ್ರರು ಬಲಿ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಸಂಘಟನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಸಂಘಟನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಅನಂತ್ ನಾಗ್ ಜಿಲ್ಲೆಯ ಸಿರ್ಹಾಮಾ ಎಂಬ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಇಂದು ಬೆಳಿಗ್ಗೆ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. 

ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸೇನಾಪಡೆ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿದ ಯೋಧರು ಇಬ್ಬರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. 

ದಕ್ಷಿಣ ಕಾಶ್ಮೀರದಲ್ಲಿ ಸಿಆರ್'ಪಿಎಫ್ ಪಡೆ ಮೇಲೆ ಉಗ್ರರ ದಾಳಿ
ದಕ್ಷಿಣ ಕಾಶ್ಮೀರದಲ್ಲಿಯೂ ಇಂದು ಬೆಳ್ಳಂಬೆಳಿಗ್ಗೆ ಉಗ್ರರು ಸಿಆರ್'ಪಿಎಫ್ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿ ಬಳಿಕ ಪರಾರಿಯಾಗಿದ್ದಾರೆ. 

ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಉಗ್ರರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com