ದೆಹಲಿ: ಡಿಸಿಎಂ ಮನೀಶ್ ಸಿಸೋಡಿಯಾಗೆ ಕೊರೋನಾ ಜೊತೆಗೆ ಡೆಂಗ್ಯೂ ಜ್ವರ!

ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ

ನವದೆಹಲಿ: ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.

ಅವರ ರಕ್ತದ ಪ್ಲೇಟ್​ಲೆಟ್​ಗಳ ಸಂಖ್ಯೆ ಗಣನೀಯವಾಗಿ ಇಳಿದಿದ್ದು ಸರ್ಕಾರಿ ಸ್ವಾಮ್ಯದ ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಯಲ್ಲಿದ್ದ ಅವರನ್ನ ಈಗ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿನಐಸಿಯುನಲ್ಲಿಡಲಾಗಿದೆ. ಕೊರೋನಾ ವೈರಸ್ ಮತ್ತು ಡೆಂಘೀ ಜ್ವರ ಎರಡೂ ಒಟ್ಟಿಗೆ ಇರುವ ಪ್ರಕರಣಗಳ ಅಪರೂಪ ಎನ್ನಲಾಗಿದೆ.

ಸೆಪ್ಟೆಂಬರ್ 14ರಂದು ಮನೀಶ್ ಸಿಸೋಡಿಯಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮನೆಯಲ್ಲೇ ಐಸೋಲೇಶನ್​ನಲ್ಲಿದ್ದ ಅವರು ಜ್ವರ ಹಾಗೂ ಉಸಿರಾಟದ ತೊಂದರೆ ಹೆಚ್ಚಾಗಿ  ಸೆಪ್ಟೆಂಬರ್ 23ರಂದು ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರ ರಕ್ತದ ಪ್ಲೇಟ್ ಲೆಟ್​ಗಳ ಸಂಖ್ಯೆ ಮತ್ತು ಆಕ್ಸಿಜನ್ ಮಟ್ಟ ಇಳಿಮುಖವಾಗುತ್ತಿರುವುದು ಕಂಡುಬಂದ ಬೆನ್ನಲ್ಲೇ ಅವರನ್ನ ದೆಹಲಿಯ ಸಾಕೇತ್ ಬಳಿ ಇರುವ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com