ರೈತರಿಗಾಗಿ ಮಾತನಾಡಿ: ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್ ಹೊಸ ಅಭಿಯಾನ

ಕೃಷಿ ಮಸೂದೆಗಳನ್ನು ವಿರೋಧಿಸಿ ಕಾಂಗ್ರೆಸ್ ಶನಿವಾರ ಸೋಷಿಯಲ್ ಮೀಡಿಯಾದಲ್ಲಿ 'ರೈತರಿಗಾಗಿ ಮಾತನಾಡಿ' ಅಭಿಯಾನವನ್ನು ಪ್ರಾರಂಭಿಸಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸಿ ಕಾಂಗ್ರೆಸ್ ಶನಿವಾರ ಸೋಷಿಯಲ್ ಮೀಡಿಯಾದಲ್ಲಿ 'ರೈತರಿಗಾಗಿ ಮಾತನಾಡಿ' ಅಭಿಯಾನವನ್ನು ಪ್ರಾರಂಭಿಸಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರನ್ನು ಶೋಷಿಸುತ್ತಿದ್ದು ಅದರ ವಿರುದ್ಧ ಜನ ದನಿ ಎತ್ತಬೇಕು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಮುಂಗಾರು ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಮೂರು ಮಸೂದೆಗಳನ್ನು ಅಂಗೀಕರಿಸಿದ್ದು, ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿವೆ.

"ಮೋದಿ ಸರ್ಕಾರವು ರೈತರ ದೌರ್ಜನ್ಯ ಮತ್ತು ಶೋಷಣೆಗೆ ವಿರುದ್ಧವಾಗಿ ನಾವು ಒಟ್ಟಾಗಿ ಧ್ವನಿ ಎತ್ತೋಣ" ಎಂದು ಗಾಂಧಿ ಟ್ವೀಟ್ ನಲ್ಲಿ ಮಾಡಿದ್ದಾರೆ.

ವಿಡಿಯೊ ಕಳುಹಿಸುವ ಮೂಲಕ ‘ರೈತರಿಗಾಗಿ ಮಾತನಾಡಿ’ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದಿರುವ ಅವರು, ಕೃಷಿ ಮಸೂದೆ ಹಿಂಪಡೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಆಗ್ರಹಿಸಿರುವ ವಿಡಿಯೊವನ್ನು ಟ್ಯಾಗ್‌ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com