ಕಾಶ್ಮೀರ: ಲೇಹ್, ಲಡಾಕ್ ನಲ್ಲಿ ಭೂಕಂಪ; ಮನೆಗಳಲ್ಲಿ ಬಿರುಕು

ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಮಧ್ಯಾಹ್ನ ಭೂಕಂಪನ ಉಂಟಾಗಿದೆ.
ಭೂಮಿ ಕಂಪಿಸಿದ್ದರಿಂದ ಅನೇಕ ಮನೆಗಳು, ಕಟ್ಟಡಗಳಲ್ಲಿ ಬಿರುಕುಗಳು ಉಂಟಾಗಿವೆ ಎಂದು ಲೇಹ್ ನ ಸ್ಥಳೀಯರು ತಿಳಿಸಿದ್ದಾರೆ. 

ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮಧ್ಯಮ ತೀವ್ರತೆಯ ಭೂಕಂಪ ಸಂಭವಿಸಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com