ಕೋವಿಡ್-19: ದೇಶದಲ್ಲಿ ಒಂದೇ ದಿನ 85,362 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 59 ಲಕ್ಷ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 59 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 59 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಒಂದೇ ದಿನ 85,362 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 59,03,933ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,089 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 93,379ಕ್ಕೆ ತಲುಪಿದೆ. 

ಈ ನಡುವೆ 59,03,933 ಮಂದಿ ಸೋಂಕಿತರ ಪೈಕಿ 48,49,585 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 9,60,969 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com