ಪೊಲೀಸ್ ಗೌರವಗಳೊಂದಿಗೆ ಎಸ್ ಪಿಬಿ ಅಂತ್ಯಕ್ರಿಯೆ: ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬಾರದ ಲೋಕಕ್ಕೆ ಪ್ರಯಾಣಿಸಿರುವ ಗಾನ ಗಾರುಡಿಗ, ಪದ್ಮ ವಿಭೂಷಣ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.ಪೊಲೀಸ್ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ತಿಳಿಸಿದ್ದಾರೆ.

Published: 26th September 2020 12:36 AM  |   Last Updated: 26th September 2020 12:52 PM   |  A+A-


SP_Balasubramanyam_remains1

ಎಸ್ ಪಿ ಬಾಲಸುಬ್ರಹ್ಮಣ್ಯಂ

Posted By : Nagaraja AB
Source : ANI

ತಮಿಳುನಾಡು: ಬಾರದ ಲೋಕಕ್ಕೆ ಪ್ರಯಾಣಿಸಿರುವ ಗಾನ ಗಾರುಡಿಗ, ಪದ್ಮ ವಿಭೂಷಣ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.

ತಿರುವಳ್ಳೂರು ಜಿಲ್ಲೆಯ ತಮಾರೈಪಕ್ಕಂ ಗ್ರಾಮದಲ್ಲಿರುವ ಅವರ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕರಿಗೆ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ತಮಿಳುನಾಡು ಮಾತ್ರವಲ್ಲದೇ, ದೇಶಾದ್ಯಂತ ಜನರ ಹೃದಯ ಗೆದಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಸಂಸ್ಕಾರ ವೇಳೆಯಲ್ಲಿ ಪೊಲೀಸ್ ಇಲಾಖೆಯಿಂದ ಗೌರವ ಸಮರ್ಪಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನ  ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪಾರ್ಥಿವ ಶರೀರವನ್ನು ಚೆನ್ನೈನಲ್ಲಿನ  ನಣಗಂಬುಕಂ ನಿವಾಸಕ್ಕೆ ತರಲಾಯಿತು. ತಡರಾತ್ರಿ ಪಾರ್ಥಿವ ಶರೀರವನ್ನು ಫಾರ್ಮ್ ಹೌಸ್ ಗೆ ತರಲಾಯಿತು.

ಕೊರೋನಾವೈರಸ್ ವಿರುದ್ಧ ಎರಡು ತಿಂಗಳು ಹೋರಾಟ ನಡೆಸಿದ 74 ವರ್ಷದ ಹಿರಿಯ ಗಾಯಕ, ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದು, ದೇಶದ ಸಂಗೀತ ಲೋಕದ ಕೊಂಡಿಯೊಂದು ಕಳಚಿದಂತಾಗಿದೆ. 

ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ 16 ಭಾಷೆಗಳಲ್ಲಿ ಸುಮಾರು 50 ಸಾವಿರ ಗೀತೆಗಳಿಗೆ ಧ್ವನಿಯಾಗಿರುವ
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಇಡೀ ದೇಶವೇ ಮರುಗಿದೆ. ಸೂಪರ್ ಸ್ಟಾರ್ ರಜನಿಕಾಂತ್, ಕಮಲ ಹಾಸನ್, ಚಿರಂಜೀವಿ ಸೇರಿದಂತೆ ಹಲವು ಸ್ಟಾರ್ ನಟರು, ಸಂಗೀತ ದಿಗ್ಗಜರು, ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದಾರೆ.


 

Stay up to date on all the latest ರಾಷ್ಟ್ರೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp