ವಿಪಕ್ಷಗಳ ವಿರೋಧದ ನಡುವೆಯೂ ಕೃಷಿ ಸಂಬಂಧಿತ ಮೂರು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ, ಇನ್ನು ಮುಂದೆ ಕಾನೂನು

ವಿಪಕ್ಷಗಳ ವಿರೋಧದ ನಡುವೆಯೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೃಷಿ ಸಂಬಂಧಿತ ಮೂರು ಮಸೂದೆಗಳಿಗೆ ಸಹಿ ಹಾಕಿದ್ದು, ಇಂದಿನಿಂದ ಕಾನೂನಾಗಿ ಮಾರ್ಪಾಡಾಗಲಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್
ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: ವಿಪಕ್ಷಗಳ ವಿರೋಧದ ನಡುವೆಯೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೃಷಿ ಸಂಬಂಧಿತ ಮೂರು ಮಸೂದೆಗಳಿಗೆ ಸಹಿ ಹಾಕಿದ್ದು, ಇಂದಿನಿಂದ ಕಾನೂನಾಗಿ ಮಾರ್ಪಾಡಾಗಲಿದೆ. 
  
ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ  ಮಸೂದೆ 2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಹಾಗೂ ರೈತರಿಗೆ ಗುತ್ತಿಗೆ ಕೃಷಿಗೆ ಪ್ರವೇಶಿಸಲು ಚೌಕಟ್ಟನ್ನು ಒದಗಿಸುವ ಮಸೂದೆಯನ್ನು ಅಂಗೀಕರಿಸಲಾಗಿತ್ತು. 

ಈ ಮಸೂದೆಗಳನ್ನು ರೈತರ ಡೆತ್ ವಾರೆಂಟ್, ಅದಕ್ಕೆ ಸಹಿ ಹಾಕುವುದಿಲ್ಲ ಎಂದು ಕಾಂಗ್ರೆಸ್ ಹೇಳಿದ್ದರೆ, ದೇಶದ ಒಟ್ಟು ಜಿಡಿಪಿಗೆ ಕನಿಷ್ಠ 20% ಕೊಡುಗೆ ನೀಡುವ ರೈತರನ್ನು ಈ ಮಸೂದೆಗಳು ಗುಲಾಮರನ್ನಾಗಿ ಮಾಡುತ್ತವೆ ಎಂದು ಪ್ರತಿ ಪಕ್ಷಗಳು ಹೇಳಿದ್ದವು.

ಮಸೂದೆಯನ್ನು ವಿರೋಧಿಸಿ ಕರ್ನಾಟಕದಲ್ಲಿ ನಾಳೆ ರೈತರು ಬಂದ್ ಗೆ ಕರೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com