ಕೋವಿಡ್-19: 24 ಗಂಟೆಗಳಲ್ಲಿ ದೆಹಲಿಯಲ್ಲಿ 3,372  ಸೋಂಕಿತರು ಪತ್ತೆ

ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ಬ್ರೇಕ್ ಹಾಕಿದ್ದ ದೆಹಲಿಯಲ್ಲಿ ನಿಧಾನಗತಿಯಲ್ಲಿ ಮಾರಕ ವೈರಸ್ ತನ್ನ ಎರಡನೇ ಅಲೆ ಸೃಷ್ಟಿಸಿದ್ದು ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 3,372  ಸೋಂಕಿತರು ಪತ್ತೆಯಾಗಿದ್ದಾರೆ.
ಕೊರೊನಾ ಸೋಂಕು
ಕೊರೊನಾ ಸೋಂಕು

ನವದೆಹಲಿ: ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ಬ್ರೇಕ್ ಹಾಕಿದ್ದ ದೆಹಲಿಯಲ್ಲಿ ನಿಧಾನಗತಿಯಲ್ಲಿ ಮಾರಕ ವೈರಸ್ ತನ್ನ ಎರಡನೇ ಅಲೆ ಸೃಷ್ಟಿಸಿದ್ದು ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 3,372  ಸೋಂಕಿತರು ಪತ್ತೆಯಾಗಿದ್ದಾರೆ.

ಆ ಮೂಲಕ ದೆಹಲಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,67,822ಕ್ಕೆ ಏರಿಕೆಯಾಗಿದ್ದು, ಈ ಪೈಕಿ ನಿನ್ನೆ 4,476 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಗುಣಮುಖರ ಸಂಖ್ಯೆ  2,32,912ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 29,717ಕ್ಕೆ ಏರಿಕೆಯಾಗಿದೆ.

ಇನ್ನು ದೆಹಲಿಯಲ್ಲಿ ನಿನ್ನೆ 46 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೆಹಲಿಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 5,193ಕ್ಕೆ ಏರಿಕೆಯಾಗಿದೆ. ನಿನ್ನೆ ದೆಹಲಿಯಲ್ಲಿ ಒಟ್ಟು 57,688 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com