ಮಹಾರಾಷ್ಟ್ರ: 24 ಗಂಟೆಗಳಲ್ಲಿ 430 ಕೋವಿಡ್ ಸೋಂಕಿತರ ಸಾವು, 20,419 ಹೊಸ ಪ್ರಕರಣ ದಾಖಲು

ಮಾರಕ ಕೊರೊನಾ ವೈರಸ್ ನಿಂದ ತತ್ತರಿಸಿಹೋಗಿರುವ ಮಹಾರಾಷ್ಟ್ರದಲ್ಲಿ ಕೊವಿಡ್ ಅಬ್ಬರ ಜೋರಾಗಿದ್ದು, ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 20,419 ಹೊಸ ಪ್ರಕರಣ ದಾಖಲಾಗಿದೆ.
ಕೋವಿಡ್-19-ಮಹಾರಾಷ್ಟ್ರ
ಕೋವಿಡ್-19-ಮಹಾರಾಷ್ಟ್ರ

ಮುಂಬೈ:  ಮಾರಕ ಕೊರೊನಾ ವೈರಸ್ ನಿಂದ ತತ್ತರಿಸಿಹೋಗಿರುವ ಮಹಾರಾಷ್ಟ್ರದಲ್ಲಿ ಕೊವಿಡ್ ಅಬ್ಬರ ಜೋರಾಗಿದ್ದು, ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 20,419 ಹೊಸ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 20,419 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 13,21,176ಕ್ಕೆ ಏರಿಕೆಯಾಗಿದೆ. ಈ ಪೈಕಿ ನಿನ್ನೆ 23,644 ಸೋಂಕಿತರು ಗುಣಮುಖರಾಗಿದ್ದು. ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 10,16,450ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಮಹಾರಾಷ್ಟ್ರದಲ್ಲಿ 2,69,119 ಸಕ್ರಿಯ ಪ್ರಕರಣಗಳಿವೆ.

ಅಂತೆಯೇ ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 430 ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 35,191ಕ್ಕೆ ಏರಿಕೆಯಾಗಿದೆ. 

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 2,282 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಮುಂಬೈನಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,96,585ಕ್ಕೆ ಏರಿಕೆಯಾಗಿದೆ. ಅಂತೆಯೇ 44 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮುಂಬೈನಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 8,750ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com