ಡ್ರಗ್ಸ್ ನಿಚಾರಣೆಗೆ ಹಾಜರಾಗಿದ್ದ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್ ಫೋನ್ ವಶಕ್ಕೆ 

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಪ್ರಕರಣ ಮತ್ತು ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎನ್‌ಸಿಬಿ ವಿಚಾರಣೆಗೆ ಹಾಜರಾಗಿದ್ದ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಸಾರಾ ಅಲಿಖಾನ್ ಅವರ ಫೋನ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Published: 27th September 2020 08:37 AM  |   Last Updated: 27th September 2020 09:21 AM   |  A+A-


Deepika padukone

ದೀಪಿಕಾ ಪಡುಕೋಣೆ

Posted By : Srinivasamurthy VN
Source : ANI

ಮುಂಬೈ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಪ್ರಕರಣ ಮತ್ತು ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎನ್‌ಸಿಬಿ ವಿಚಾರಣೆಗೆ ಹಾಜರಾಗಿದ್ದ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಸಾರಾ ಅಲಿಖಾನ್ ಅವರ ಫೋನ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆಯ (ಎನ್‌ಸಿಬಿ) ವಿಚಾರಣೆಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ನಟಿ ಸಾರಾ ಅಲಿಖಾನ್ ಶನಿವಾರ ಬೆಳಿಗ್ಗೆ ಹಾಜರಾದರು. ದೀಪಿಕಾ ಅವರ ಉದ್ಯಮ ವ್ಯವಸ್ಥಾಪಕಿ ಕರಿಷ್ಮಾ ಪ್ರಕಾಶ್ ಅವರನ್ನು ಎನ್‌ಸಿಬಿಯ ವಿಶೇಷ ತಂಡ ಶುಕ್ರವಾರ ವಿಚಾರಣೆಗೆ ಒಳಪಡಿಸಿತ್ತು. ಶುಕ್ರವಾರ ರಾತ್ರಿಯೇ ದೀಪಿಕಾ ಅವರು ಕಾನೂನು ಸಲಹೆಗಾರರನ್ನು ಭೇಟಿಯಾಗಿದ್ದರು.  ವಿಚಾರಣೆ ವೇಳೆ ತಾವೂ ಹಾಜರಿರಬಹುದೇ ಎಂದು ದೀಪಿಕಾ ಪತಿ, ನಟ ರಣವೀರ್ ಸಿಂಗ್ ಮನವಿ ಮಾಡಿದ್ದರು ಎಂದು ವರದಿಯಾಗಿತ್ತು. ಆದರೆ, ಅಂತಹ ಯಾವುದೇ ಮನವಿ ಬಂದಿಲ್ಲ ಎಂದು ಬಳಿಕ ಎನ್‌ಸಿಬಿ ಸ್ಪಷ್ಟನೆ ನೀಡಿತ್ತು.

ಮೂಲಗಳ ಪ್ರಕಾರ ಪ್ರಕಾಶ್ ಅವರ ವಾಟ್ಸ್‌ಆ್ಯಪ್ ಸಂದೇಶಗಳಲ್ಲಿ ಡ್ರಗ್ಸ್‌ ವ್ಯವಹಾರಕ್ಕೆ ಸಂಬಂಧಿಸಿ ‘ಡಿ’ ಎಂಬ ವ್ಯಕ್ತಿ ಜತೆಗೆ ಸಂಬಾಷಣೆ ನಡೆದಿದೆ. ಆ ವ್ಯಕ್ತಿ ಯಾರು ಎಂಬುದನ್ನು ತಿಳಿಯಬೇಕಿದೆ ಎಂದು ಎನ್‌ಸಿಬಿ ಮೂಲಗಳು ಈ ಹಿಂದೆಯೇ ತಿಳಿಸಿವೆ.

ಉಳಿದಂತೆ ನಟಿಯರಾದ ಶ್ರದ್ಧಾ ಕಪೂರ್‌, ಸಾರಾ ಅಲಿಖಾನ್‌ ಕೂಡ ಎನ್‌ಸಿಬಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದು ಈ ವೇಳೆ ಸಾರಾ ಅಲಿಖಾನ್ ಫೋನ್ ಅನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. 

ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್‌, ಸಾರಾ ಅಲಿಖಾನ್‌ ಹಾಗೂ ರಕುಲ್‌ ಪ್ರೀತ್‌ ಸಿಂಗ್‌ ಅವರಿಗೆ ಇದೇ 23ರಂದು ಎನ್‌ಸಿಬಿ ಸಮನ್ಸ್ ಜಾರಿ ಮಾಡಿತ್ತು.

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp