ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ಅಲ್-ಖೈದಾ ಭಯೋತ್ಪಾದಕ ಅರೆಸ್ಟ್

 ಪಾಕಿಸ್ತಾನ ಪ್ರಾಯೋಜಿತ ಅಲ್-ಖೈದಾದ  ಸಂಚಿನಲ್ಲಿ ಭಾಗಿಯಾಗಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ವ್ಯಕ್ತಿಯೊಬ್ಬನನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

Published: 27th September 2020 09:28 PM  |   Last Updated: 27th September 2020 09:28 PM   |  A+A-


Posted By : Raghavendra Adiga
Source : PTI

ನವದೆಹಲಿ: ಪಾಕಿಸ್ತಾನ ಪ್ರಾಯೋಜಿತ ಅಲ್-ಖೈದಾದ  ಸಂಚಿನಲ್ಲಿ ಭಾಗಿಯಾಗಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ವ್ಯಕ್ತಿಯೊಬ್ಬನನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎನ್‌ಐಎ ಶನಿವಾರ ಜಲಂಗ್ ನಲ್ಲಿರುವ ಆತನ ನಿವಾಸದಿಂದ ಶಮೀಮ್ ಅನ್ಸಾರಿಯನ್ನು  ಬಂಧಿಸಿದೆ ಎಂದು ಅವರು ಹೇಳಿದರು.

"ಈ ಹಿಂದೆ ಬಂಧಿಸಲ್ಪಟ್ಟವರೊಂದಿಗೆ ಆತನ ಸಂಪರ್ಕವನ್ನು ನಾವು ಕಂಡುಕೊಂಡಿದ್ದೇವೆ. ನಾವು ಅವನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದೇವೆ. ಅವನನ್ನು  ವಿಚಾರಣೆ ನಡೆಸಲಾಗುತ್ತಿದೆ" ಎಂದು ಅಧಿಕಾರಿ ಹೇಳಿದರು.

ಪಾಕಿಸ್ತಾನ ಪ್ರಾಯೋಜಿತ ಅಲ್-ಖೈದಾದ ಒಡನಾಟಕ್ಕಾಗಿ ಈ ಹಿಂದೆ ಒಂಬತ್ತು ಜನರನ್ನು - ಪಶ್ಚಿಮ ಬಂಗಾಳ ಹಾಗೂ ಕೇರಳದಲ್ಲಿ ಬಂಧಿಸಲಾಗಿತ್ತು. 

ಪ್ರಾಥಮಿಕ ತನಿಖೆಯಲ್ಲಿ ಅನ್ಸಾರಿ ಈ ಹಿಂದೆ ಕೆಲಸಕ್ಕಾಗಿ ಕೇರಳಕ್ಕೆ ಹೋಗಿ ತನ್ನೂರಿಗೆ ಮರಳಿದ್ದ ಎಂದು ತಿಳಿದಿದೆ. 
 

Stay up to date on all the latest ರಾಷ್ಟ್ರೀಯ news
Poll
Marraige

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 18 ರಿಂದ ಹೆಚ್ಚಿಸಬೇಕೆ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp