ಜಮ್ಮು ಮತ್ತು ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೊರದ ಸಂಬಾರ ಎಂಬಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. 
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೊರದ ಸಂಬಾರ ಎಂಬಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. 

ಜಮ್ಮು ಮತ್ತು ಕಾಶ್ಮೀರ ಪೊಲೀಸರು, ರಾಷ್ಟ್ರೀಯ ರೈಫಲ್ ಮತ್ತು ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಇಬ್ಬರು ಉಗ್ರರು ಮೃತಪಟ್ಟಿದ್ದು ಕಾರ್ಯಾಚರಣೆ ಮುಂದುವರೆದಿದೆ. 

ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ನಂತರ ಸೇನೆ ಕಾರ್ಯಾಚರಣೆ ನಡೆಸಿತ್ತು. ಸದ್ಯ ಇಬ್ಬರು ಉಗ್ರರು ಹತರಾಗಿದ್ದು ಇನ್ನು ಹಲವರು ಅಡಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com