ತಮಿಳುನಾಡು ವಿಧಾನಸಭೆ ಚುನಾವಣೆ: ಅಕ್ಟೋಬರ್ 7ರಂದು ಎಐಎಡಿಎಂಕೆ ಸಿಎಂ ಅಭ್ಯರ್ಥಿ ಘೋಷಣೆ
ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಇ ಕೆ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಪನ್ನೀರ್ ಸೇಲ್ವಂ ಅವರು ಅಕ್ಟೋಬರ್ 7 ರಂದು ಪ್ರಕಟಿಸಲಿದ್ದಾರೆ.
Published: 28th September 2020 06:11 PM | Last Updated: 28th September 2020 06:11 PM | A+A A-

ಪಳನಿಸ್ವಾಮಿ - ಪನ್ನೀರ್ ಸೇಲ್ವಂ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಇ ಕೆ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಪನ್ನೀರ್ ಸೇಲ್ವಂ ಅವರು ಅಕ್ಟೋಬರ್ 7 ರಂದು ಪ್ರಕಟಿಸಲಿದ್ದಾರೆ.
ಇಂದು ನಾಲ್ಕು ಗಂಟೆಗಳಿಗಿಂತ ಹೆಚ್ಚು ಕಾಲ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಂತರ ಎಐಎಡಿಎಂಕೆ ಉಪ ಸಂಯೋಜಕ ಕೆ.ಪಿ.ಮುನುಸಾಮಿ ಈ ವಿಷಯ ತಿಳಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಮತ್ತು ಪಕ್ಷದ ವ್ಯವಹಾರಗಳಿಗೆ ಮಾರ್ಗದರ್ಶನ ನೀಡುವ ಸ್ಟೀರಿಂಗ್ ಸಮಿತಿಯ ಸಂವಿಧಾನದ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಸುದೀರ್ಘ ಚರ್ಚೆಗಳು ನಡೆದಿವೆ. ಆದರೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು ಎಐಎಡಿಎಂಕೆ ವಕ್ತಾರ ವಿ ಪುಗಝೆಂಡಿ ಅವರು ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಬೇಕು ಎಂಬುದರ ಬಗ್ಗೆ ಪ್ರಜಾಪ್ರಭುತ್ವ ರೀತಿಯಲ್ಲಿ ಸುದೀರ್ಘ ಚರ್ಚೆಗಳು ನಡೆದವು ಮತ್ತು ಈ ಸಂಬಂಧ ಪಕ್ಷ ಯಾವುದೇ ನಿರ್ಧಾರನ್ನು ಘೋಷಿಸಿದರೂ ಎಐಎಡಿಎಂಕೆ ಕಾರ್ಯಕರ್ತರು ಸ್ವೀಕರಿಸುತ್ತಾರೆ ಎಂದು ಕಂದಾಯ ಸಚಿವ ಆರ್.ಬಿ. ಉದಯಕುಮಾರ್ ತಿಳಿಸಿದ್ದಾರೆ.