ಸಿವಿಲ್ ಸರ್ವಿಸ್ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಗೆ ಯುಪಿಎಸ್ ಸಿ ಹೇಳಿಕೆ

ನಾಗರಿಕ ಸೇವಾ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಾರ್ವಜನಿಕ ಸೇವಾ ಆಯೋಗ(ಯುಪಿಎಸ್ ಸಿ) ಸುಪ್ರೀಂ ಕೋರ್ಟ್ ಗೆ ಸೋಮವಾರ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ನಾಗರಿಕ ಸೇವಾ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಾರ್ವಜನಿಕ ಸೇವಾ ಆಯೋಗ(ಯುಪಿಎಸ್ ಸಿ) ಸುಪ್ರೀಂ ಕೋರ್ಟ್ ಗೆ ಸೋಮವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ, ಲೋಕಸೇವಾ ಆಯೋಗಕ್ಕೆ ತನ್ನ ನಿಲುವನ್ನು ತಿಳಿಸಿ ನಾಳೆಯೊಳಗೆ ಅಫಿಡವಿಟ್ಟು ಸಲ್ಲಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ನಾಡಿದ್ದು ಬುಧವಾರಕ್ಕೆ ಮುಂದೂಡಿದೆ.
ಯುಪಿಎಸ್ ಸಿ ಆಕಾಂಕ್ಷಿಗಳು ಸಿವಿಲ್ ಸರ್ವಿಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇಂದು ವಿಚಾರಣೆ ವೇಳೆ, ನ್ಯಾಯವಾದಿ ನರೇಶ್ ಕೌಶಿಕ್ ಯುಪಿಎಸ್ ಸಿ ಪರವಾಗಿ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾಗಿ ಸಂಪೂರ್ಣವಾಗಿ ಪರೀಕ್ಷೆ ಮುಂದೂಡುವುದು ಕಷ್ಟ ಎಂದು ಹೇಳಿದರು.

ಯುಪಿಎಸ್ ಸಿ ಪ್ರಿಲಿಮ್ಸ್ ಪರೀಕ್ಷೆಯನ್ನು ಸೆಪ್ಟೆಂಬರ್ 30ಕ್ಕೆ ನಡೆಸಬೇಕಾಗಿತ್ತು. ನಂತರ ಅದನ್ನು ಅಕ್ಟೋಬರ್ 4ಕ್ಕೆ ಮುಂದೂಡಲಾಯಿತು. ಇನ್ನು ಮತ್ತಷ್ಟು ದಿನ ಮುಂದೂಡಿದರೆ ಪರೀಕ್ಷೆ ನಡೆಸುವುದರ ಉದ್ದೇಶಕ್ಕೆ ಮಹತ್ವವೇ ಇಲ್ಲದಂತಾಗುತ್ತದೆ ಎಂದು ನ್ಯಾಯಮೂರ್ತಿ ಕೌಶಿಕ್ ಹೇಳಿದರು.

ಸಿವಿಲ್ ಸರ್ವಿಸ್ ಪರೀಕ್ಷೆ ಆಕಾಂಕ್ಷಿಗಳು ಪರೀಕ್ಷೆಯನ್ನು ಎರಡರಿಂದ ಮೂರು ತಿಂಗಳು ಮುಂದೂಡುವಂತೆ ಕೋರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com