ದೆಹಲಿಯಲ್ಲಿ ಕೃಷಿ ಸಂಬಂಧಿತ ಮಸೂದೆ ವಿರೋಧಿಸಿ ಪ್ರತಿಭಟನೆ: ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ಸೋಮವಾರ ನಡೆಸುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಟ್ರ್ಯಾಕ್ಟರ್ ಸುಟ್ಟು ಪ್ರತಿಭಟನೆ
ಟ್ರ್ಯಾಕ್ಟರ್ ಸುಟ್ಟು ಪ್ರತಿಭಟನೆ

ನವದೆಹಲಿ: ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ಸೋಮವಾರ ನಡೆಸುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ನವದೆಹಲಿ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಸೋಮವಾರ ಬೆಳಗ್ಗೆ 7.15 ರಿಂದ 7.30ರ ಸಂದರ್ಭದಲ್ಲಿ ದೆಹಲಿ ಕೇಂದ್ರ ಭಾಗವಾಗಿರುವ ಇಂಡಿಯಾ ಗೇಟ್ ಬಳಿ ನೆರೆದ 15 ರಿಂದ 20 ಮಂದಿ ಪ್ರತಿಭಟನಾಕಾರರು ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ವರದಿ ತಿಳಿಸಿದೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹೊತ್ತಿ ಉರಿದ ಟ್ರ್ಯಾಕ್ಟರ್ ನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ. ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದವರ ಗುರುತು ಪತ್ತೆ ಮಾಡುವ ನಿಟ್ಟಿನಲ್ಲಿ  ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com