ಪುಲ್ವಾಮಾದಲ್ಲಿ ಶೋಧ ಕಾರ್ಯಾಚರಣೆ ಪುನರಾರಂಭ: ಈವರೆಗೆ ಇಬ್ಬರು ಎಲ್‍'ಇಟಿ ಉಗ್ರರು ಹತ

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮಾದಲ್ಲಿ ಸೋಮವಾರ ಬೆಳಿಗ್ಗೆ ತೀವ್ರ ಶೋಧ ಕಾರ್ಯಾಚರಣೆ ಪುನರಾರಂಭಗೊಂಡಿದ್ದು, ಈವರೆಗೂ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮಾದಲ್ಲಿ ಸೋಮವಾರ ಬೆಳಿಗ್ಗೆ ತೀವ್ರ ಶೋಧ ಕಾರ್ಯಾಚರಣೆ ಪುನರಾರಂಭಗೊಂಡಿದ್ದು, ಈವರೆಗೂ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಸಾಂಬೂರಾ ಪ್ರದೇಶದಲ್ಲಿ ಭದ್ರತಾ ಪಡೆಗಳು  ಎನ್‌ಕೌಂಟರ್‌ ನಡೆಸಿದ್ದು. ಕಾರ್ಯಾಚರಣೆ ವೇಳೆ ಓರ್ವ ಯೋಧ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸವೆ. 

ಭಾನುವಾರ ರಾತ್ರಿಯಿಂದ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಸ್ಥಳದಲ್ಲಿ ಇನ್ನೂ ಕೆಲ ಉಗ್ರರು ಅವಿತುಕೊಂಡಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 
ಜಮ್ಮು ಮತ್ತು ಕಾಶ್ಮೀರ ಪೊಲೀಸರು, 50 ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ಪ್ರದೇಶದಲ್ಲಿ ಕೆಲವು ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ನೀಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ವ್ಯಾಪಕವಾಗಿ ಉಗ್ರ ವಿರೋಧಿ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಹಲವು ಉಗ್ರರರನ್ನು ಸಂಹಾರ ಮಾಡಲಾಗಿದೆ.

ಈ ಮಧ್ಯೆ, ಪುಲ್ವಾಮ ಜಿಲ್ಲೆಯಲ್ಲಿ ಇಂಟರ್ ನೆಟ್ ‍ಸೇವೆಯನ್ನು ಸ್ಥಗಿತಗೊಳಿಸಿರುವುದರಿಂದ ಇಂದು ಆನ್ ಲೈನ್ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿಗಳಿಗೆ ಭಾರೀ ತೊಂದರೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com