ಕೋವಿಡ್-19: 8 ವೈದ್ಯಕೀಯ ಸಿಬ್ಬಂದಿಗೆ ಸೋಂಕು, ತಮಿಳುನಾಡಿನಲ್ಲಿ ಸರ್ಕಾರಿ ಆಸ್ಪತ್ರೆ ಸ್ಥಗಿತ

8 ಮಂದಿ ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಸರ್ಕಾರಿ ಆಸ್ಪತ್ರೆಯನ್ನೇ ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಕೊರೋನಾ ಮಹಾಮಾರಿ
ಕೊರೋನಾ ಮಹಾಮಾರಿ

ತಿರುಪುರ್: 8 ಮಂದಿ ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಸರ್ಕಾರಿ ಆಸ್ಪತ್ರೆಯನ್ನೇ ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಹೌದು..ತಮಿಳುನಾಡಿನ ತಿರುಪೂರ್ ನಲ್ಲಿರುವ ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ಆರೋಗ್ಯ ಸಿಬ್ಬಂದಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಮೂರುದಿನಗಳ ಕಾಲ ಇಡೀ ಆಸ್ಪತ್ರೆಯನ್ನು ಮುಚ್ಚಲಾಗಿದೆ. ಭಾನುವಾರ ನಿನ್ನೆ ಒಂದೇ ದಿನ ಆಸ್ಪತ್ರೆಯ 8 ಮಂದಿ ಸಿಬ್ಬಂದಿಗಳ ಕೋವಿಡ್ ಟೆಸ್ಟ್ ವರದಿ ಪಾಸಿಟಿವ್ ಬಂದಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯ ಇತರೆ 33 ಸಿಬ್ಬಂದಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಮೂರು ದಿನಗಳ ಕಾಲ ಮುಚ್ಚಿ ಸ್ಯಾನಿಟೈಸೇಷನ್ ಮಾಡಲು ಅಧಿಕಾರಿಗಳು ನಿರ್ಣಯಿಸಿದ್ದಾರೆ.

ಅವಿನಾಶಿ ಸರ್ಕಾರಿ ಆಸ್ಪತ್ರೆಯನ್ನು ಕೋವಿಡ್ ಸೋಂಕು ಚಿಕಿತ್ಸೆಗೆ ಮೀಸಲಿಡಲಾಗಿತ್ತು. ಇದೀಗ ಆಸ್ಪತ್ರೆಯನ್ನು ಮುಚ್ಚುವ ಹಿನ್ನಲೆಯಲ್ಲಿ ಆಸ್ಪತ್ರೆಯ ರೋಗಿಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com